ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದು ತಕ್ಷಣ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದರು.

ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಮೃತ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಜತೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕಾಡಾನೆ ಹಾವಳಿ ತಪ್ಪಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದ್ದೇನೆ.

ಅರಣ್ಯ ಸಚಿವರೂ ಇಲ್ಲಿಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳುತ್ತಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜತೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಇದೇ ವೇಳೆ ತಿಳಿಸಿದ್ದಾರೆ. ಕಾಡಾನೆಗಳಿಗೆ ಗುಂಡು ಹೊಡೆದು ಕೊಲ್ಲಬೇಕು ಎನ್ನುವ ಸ್ಥಳೀಯರ ಮತ್ತು ಪ್ರತಿಭಟನಾಕಾರರ ಒತ್ತಾಯದ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಆ ಹಂತಕ್ಕೆ ಯೋಚನೆ ಮಾಡುವುದು ಬೇಡ. ಇತರೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

Gayathri SG

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

8 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

14 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

28 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

30 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

42 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

49 mins ago