News Karnataka Kannada
Sunday, May 12 2024
ಚಿಕಮಗಳೂರು

ಡಿ.ಸಿ ಮತ್ತು ಎಸ್ಪಿ ವರ್ಗಾವಣೆಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ದೂರು

Complaint filed with Election Commission seeking transfer of DC and SP
Photo Credit : News Kannada

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮುಕ್ತ ಮತ್ತು ನಿಸ್ಪಕ್ಷ ಪಾತ ಚುನಾವಣೆ ನಡೆಸುವ ಸಲು ವಾಗಿ ಜಿಲ್ಲೆಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಕಳೆದ ಮಾ.೧೦ರಂದು ಕೇಂದ್ರ ಚುನಾವಣಾ ಆಯೋಗದ ಆಯು ಕ್ತರಿಗೆ ಅವರು ಬರೆದಿರುವ ದೂರಿನ ಪ್ರತಿ ಪತ್ರಿಕೆಗಳಿಗೆ ಲಭ್ಯವಾಗಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಕೆ.ಎನ್.ರಮೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯಾಗಿರುವ ಉಮಾ ಪ್ರಶಾಂತ್ ಅವರು ಆಡಳಿತ ಪಕ್ಷದ ಕೆಲ ರಾಜಕಾರಣಿಗಳು ಹಾಗೂ ಮುಖಂಡರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಶಂಕೆ ಇದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಕ್ತ ಹಾಗೂ ನಿಷ್ಪಕ್ಷ ಪಾತವಾದ ಚುನಾವಣೆ ನಡೆಯಲು ಸಾಧ್ಯವಿಲ್ಲ ಎಂಬ ಅನುಮಾನ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕ್ರಮವಹಿಸ ಬೇಕೆಂದು ಅವರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು