News Karnataka Kannada
Sunday, May 05 2024
ಚಿಕಮಗಳೂರು

ನುಡಿದಂತೆ ನಡೆದ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು‌ ಖಚಿತ: ಜಯಪ್ರಕಾಶ್ ಹೆಗ್ಡೆ

ವಿಧಾನ ಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ ನುಡಿದಂತೆ ನಡೆದ ರಾಜ್ಯ ಸರ್ಕಾರದ ನಡೆಯ ಪರಿಣಾಮ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವಿಗೆ ಕಾರಣವಾಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ವಿಶ್ವಾಸ ವ್ಯಕ್ತಪಡಿಸಿದರು.
Photo Credit : NewsKarnataka

ಚಿಕ್ಕಮಗಳೂರು: ವಿಧಾನ ಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ ನುಡಿದಂತೆ ನಡೆದ ರಾಜ್ಯ ಸರ್ಕಾರದ ನಡೆಯ ಪರಿಣಾಮ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವಿಗೆ ಕಾರಣವಾಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಲಕ್ಯಾ, ಕಳಸಾಪುರ, ಸಿಂದಿಗೆರೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮತ ಯಾಚನೆ ಮಾಡಿ ಮಾತನಾಡಿದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿ ಯೋಜನೆಗಳನ್ನು ಕೊಡುವುದಾಗಿ ಘೋಷಣೆ ಮಾಡಿದ್ದು, ಈ ಗ್ಯಾರಂಟಿ ಯೋಜನೆಗಳು ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ ಎಂದು ದೃಢವಿಶ್ವಾಸ ವ್ಯಕ್ತಪಡಿಸಿದರು.

ʼಕೇಂದ್ರದ ಬಿಜೆಪಿ ಸರ್ಕಾರ ಶ್ರೀಮಂತರ ೧೧ ಸಾವಿರ ಕೋಟಿ ರೂ ಸಾಲ ಮನ್ನ ಮಾಡಿದರೆ ಆರ್ಥಿಕ ದಿವಾಳಿಯಾಗುವುದಿಲ್ಲ. ಅದೇ ಬಡವರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಸ್ವಾವಲಂಬಿಗಳನ್ನಾಗಿಸಿದರೆ ಸಹಿಸಿಕೊಳ್ಳಲಾಗದೆ ಸೋಲಿನ ಭೀತಿಯಿಂದ ಬಿಜೆಪಿ ಕಾಂಗ್ರೆಸ್ ಪಕ್ಷದ ವಿರುದ್ಧ ಈ ರೀತಿ ಅಪಪ್ರಚಾರದಲ್ಲಿ ತೊಡಗಿದೆʼ ಎಂದು ಆರೋಪಿಸಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುತ್ತೇವೆ. ವರ್ಷಕ್ಕೆ ೧೦ ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇವೆ, ಪ್ರತೀ ಜನಧನ್ ಖಾತೆಗೆ ೧೫ ಲಕ್ಷ ರೂ ತುಂಬುತ್ತೇವೆ ಎಂಬ ಇತ್ಯಾದಿ ಸುಳ್ಳು ಭರವಸೆಗಳ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಜನಪರವಾದ ಯೋಜನೆಗಳನ್ನು ಕೈಗೊಳ್ಳದೆ ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸದಲ್ಲಿಯೇ ಕಾಲಹರಣ ಮಾಡಿದ್ದಾರೆ. ಈ ಎಲ್ಲಾ ಅಂಶಗಳನ್ನು ಜನತೆ ಗಂಭೀರವಾಗಿ ಪರಿಗಣಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಲಿದೆ ಎಂದರು.

ಭದ್ರ ಮೇಲ್ದಂಡೆ ಯೋಜನೆಗೆ ಹಣ ಮಂಜೂರು ಮಾಡಿದ್ದಾರೆ. ಬಿಡುಗಡೆ ಮಾಡಿಲ್ಲ. ಕರಗಡ, ರಣಘಟ್ಟ ನೀರಾವರಿ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದು ಬಯಲು ಭಾಗದ ಕೆರೆಗಳನ್ನು ತುಂಬಿಸುವುದಾಗಿ ಹೇಳಿದ್ದ ಸಿ.ಟಿ ರವಿ ಅವರು ಏನೂ ಮಾಡದೆ ಜನವಿರೋಧಿಯಾಗಿದ್ದರು.ಈ ಹಿನ್ನೆಲೆಯಲ್ಲಿ ಏ.೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡಿ ನನ್ನನ್ನು ಜಯಶೀಲನನ್ನಾಗಿ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಿಜೆಪಿಗೆ ಈ ಚುನಾವಣೆಯಲ್ಲಿ ಸೋಲಿನ ಭೀತಿ ಉಂಟಾಗಿದ್ದು, ಇದರಿಂದಾಗಿ ನಿನ್ನೆ ಸಖರಾಯಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಗ್ಯಾರಂಟಿ ಯೋಜನೆಗಳನ್ನು ನಂಬಬೇಡಿ ಎಂದು ಮತದಾರರಿಗೆ ಹೇಳಿದ್ದಾರೆ. ನುಡಿದಂತೆ ನಡೆದು ಗ್ಯಾರಂಟಿಯನ್ನು ಕೊಟ್ಟಮೇಲೆ ನಂಬಬೇಡಿ ಎಂದರೆ ಹೇಗೆ ಎಂದು ವ್ಯಂಗ್ಯವಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಉತ್ತಮ, ಸರಳ ಸಜ್ಜನಿಕೆ ವ್ಯಕ್ತಿತ್ವದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರಾಗಿದ್ದು ಅವರನ್ನು ಪರಿಚಯಿಸುವ ಅಗತ್ಯ ಇಲ್ಲ. ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಿಂದೆ ಸಂಸದರಾಗಿದ್ದ ಅವರು ಮಾಡಿರುವ ಜನಪರ ಕಾರ್ಯಗಳು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಹೆಸರುವಾಸಿಯಾಗಿವೆ ಎಂದರು.

ಕರಗಡ ನೀರಾವರಿ ಯೋಜನೆಗೆ ೧೦ ಕೋಟಿ ರೂ ಮಂಜೂರು ಮಾಡಿ ಬಿಡುಗಡೆ ಮಾಡಿದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು.ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದಲ್ಲಿ ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಿದ್ದಾರೆ.ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಯುವನಿಧಿ ಈ ಯೋಜನೆಗಳು ಜನರಿಗೆ ತುಂಬಾ ಪ್ರಯೋಜನಕಾರಿಯಾಗಿವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೈನಿಕರಂತೆ ಸನ್ನದ್ಧರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರುಗಳನ್ನು ಪ್ರತೀ ಕುಟುಂಬ ನೆನಪಿಸಿಕೊಳ್ಳುವ ಕಾಲ ಸನ್ನಿಹಿತವಾಗಿದ್ದು, ಜನರ ಮಧ್ಯೆ ಇದ್ದೇವೆ. ಮತದಾರರ ಅಭಿಪ್ರಾಯ ಕಾಂಗ್ರೆಸ್ ಪರವಾಗಿದ್ದು ಗೆಲುವು ನಿಶ್ಚಿತ ಎಂದರು.
ಶಾಸಕ ಹೆಚ್.ಡಿ ತಮ್ಮಯ್ಯ ಮಾತನಾಡಿ, ಬಡವರ ಬದುಕಿನ ಬಗ್ಗೆ ಚಿಂತನೆ ಮಾಡಿರುವ ರಾಜ್ಯ ಸರ್ಕಾರ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡಿದರೆ ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಇವರುಗಳ ಕೈ ಬಲಪಡಿಸಿದಂತೆ ಆಗುತ್ತದೆ.ಈ ೫ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಆದ್ದರಿಂದ ಉತ್ತಮ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಭಾರೀ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ಕಳೆದ ೨೦ ವರ್ಷಗಳ ಆಡಳಿತ ನಡೆಸಿದ ಸಿ.ಟಿ ರವಿ ಅವರು ಅಭಿವೃದ್ಧಿ ಹೆಸರಲ್ಲಿ ಕೇವಲ ಮಂಜೂರು ಮಾಡಿಸಿದ್ದಾರೆ ವಿನಃ ಕಾರ್ಯರೂಪಕ್ಕೆ ತಂದು ಜನರಿಗೆ ಎಲ್ಲಿ ಕೊಟ್ಟಿದ್ದಾರೆಂದು ಪ್ರಶ್ನಿಸಿದ ಅವರು ಅಧಿಕಾರವಿಲ್ಲದೆ ಹೇಳಿಕೆ ನೀಡುತ್ತಿರುವ ಮಾಜಿ ಶಾಸಕರ ಮಾತಿಗೆ ಹೆಚ್ಚು ಬೆಲೆ ಕೊಡದೆ ಜನತೆ ನೀಡಿರುವ ಜನಸೇವೆಗೆ ಬದ್ಧನಾಗಿರುವುದಾಗಿ ತಿಳಿಸಿದರು.

ತಾವು ಶಾಸಕರಾದ ನಂತರ ಆರೋಗ್ಯ, ಶಿಕ್ಷಣ, ನೀರಾವರಿ ಯೋಜನೆಗಳಿಗೆ ಆದ್ಯತೆ ಮೇಲೆ ಕೆಲಸ ಮಾಡಲು ಬದ್ಧನಾಗಿದ್ದು, ಅನುದಾನ ತಂದು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಬಯಲು ಭಾಗದ ಕೆರೆಗಳನ್ನು ತುಂಬಿಸುವುದಾಗಿ ಭರವಸೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ೬ ತಿಂಗಳಲ್ಲಿ ಅನುಷ್ಠಾನ ಮಾಡಿ ಜಾರಿಗೆ ತರಲಾಗಿದೆ.ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಮತ ನೀಡಿ ಗೆಲ್ಲಿಸಿದರೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಜನಪರ ಯೋಜನೆಗಳನ್ನು ಜಾರಿ ಮಾಡುತ್ತಾರೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹೆಚ್.ಪಿ ಮಂಜೇಗೌಡ, ಮಹಡಿಮನೆ ಸತೀಶ್, ಬಿ.ಹೆಚ್ ಹರೀಶ್, ಎನ್.ಡಿ ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು