ಕಾಮಗಾರಿಗೆ ತಡೆ ಅಭಿವೃದ್ಧಿ ಹಿನ್ನಡೆ: ಸಿ.ಟಿ.ರವಿ ಆರೋಪ

ಚಿಕ್ಕಮಗಳೂರು : ಹಿಂದಿನ ಸರ್ಕಾರದ ಎಲ್ಲಾ ಕಾಮಗಾರಿ ಮತ್ತು ಯೋಜನೆಗಳನ್ನು ತಡೆ ಹಿಡಿಯಲಾಗಿದ್ದು, ಇದರಿಂದಾಗಿ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆ ಉಂಟಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗಿದ್ದ ಅಧಿಕಾರ ಉಪಯೋಗಿಸಿಕೊಂಡು ಕಷ್ಟಪಟ್ಟು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ೫೩೦೦ ಕೋಟಿ ರು. ಅನುದಾನ ಮಂಜೂರು ಮಾಡಿಸಲಾಗಿತ್ತು. ಆದರೆ, ಒಂದೇ ಒಂದು ಆದೇಶದಲ್ಲಿ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ಕೆಲಸಗಳು ಮುಕ್ತಾಯ ಹಂತಕ್ಕೆ, ಮತ್ತೆ ಕೆಲವು ಅರ್ಧ ಆಗಿವೆ. ಇನ್ನು ಕೆಲವು ಆರಂಭವಾಗಬೇಕಾಗಿದೆ, ಪೇಮೆಂಟ್ ಬರುತ್ತಿಲ್ಲ. ಚಿಕ್ಕಮಗಳೂರು ಮಲೆನಾಡು ಜಿಲ್ಲೆ ಅಗಿದ್ದರಿಂದ ಮಳೆಗಾಲದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಷ್ಟವಾಗಲಿದೆ. ಅದ್ದರಿಂದ ಕಾಮಗಾರಿಗಳನ್ನು ಕೂಡಲೇ ಪುನಾರಂಭಿಸಬೇಕು ಎಂದರು.

ನಾವು ಒಳ್ಳೆಯ ಕೆಲಸ ಮಾಡಿದರೂ ಜನರ ವಿಶ್ವಾಸಗಳಿಸುವಲ್ಲಿ ವಿಫಲರಾಗಿದ್ದೇವೆ. ಹೊಸ ಕಾಮಗಾರಿ ಮಂಜೂರು ಮಾಡಿಸುವುದು ಮತ್ತು ಹಳೆ ಕಾಮಗಾರಿ ರದ್ದಾಗದಂತೆ ನೋಡಿಕೊಳ್ಳುವ ಜವಬ್ದಾರಿ ಅವರ ಮೇಲಿದೆ. ಹಳೆ ಕಾಮಗಾರಿ ಪೂರ್ಣಗೊಳಿಸಿ, ಮುಂದಿನ ೫ ವರ್ಷದಲ್ಲಿ ರಿಪೋರ್ಚ್ ಕಾರ್ಡ್ ತೋರಿಸಿ ಎಂದ ಅವರು ಇದು, ಎಚ್ಚರಿಸುವುದಲ್ಲ ನೆನಪಿಸುವುದು ಎಂದು ಹೇಳಿದರು. ಸರ್ಕಾರ ಯಾವುದೇ ಇರಲಿ, ಅದೊಂದು ಸಂವಿಧಾನದ ಆಶಯದಂತೆ ಚುನಾಯಿತ ಜನತಾ ಸರ್ಕಾರ ಆಗಿರುತ್ತದೆ. ಸರ್ಕಾರ ನಡೆಸುವವರು ಜನರ ತೆರಿಗೆ ಹಣದಲ್ಲಿ ಜನರ ಕಲ್ಯಾಣಕ್ಕಾಗಿಯೇ ಅಭಿವೃದ್ಧಿ ಕಾರ್ಯಗಳನ್ನು ಕಾನೂನಿನ ಅಡಿಯಲ್ಲಿ ನಿರ್ವಹಿಸುವುದು ಚುನಾಯಿತ ಸರ್ಕಾರದ ಕರ್ತವ್ಯ ಆಗಿರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಜಿಲ್ಲೆ ಶಾಸಕಕರಿಗೆ ಬಹಿರಂಗ ಪತ್ರ: ಸರ್ಕಾರ ಬದಲಾವಣೆ ಆದರೆ ಚುನಾಯಿತ ಪ್ರತಿನಿಧಿಗಳು, ಪಕ್ಷಗಳು ಬದಲಾಗುತ್ತವೆ ಹೊರತು ಆಡಳಿತ ಪಕ್ಷದ ಮೂಗಿನ ನೇರಕ್ಕೆ ಪೂರ್ಣ ಕಾನೂನುಗಳು ಮತ್ತು ಮೂಲಭೂತ ಸೌಕರ್ಯದಡಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಬದಲಾಗುವುದಿಲ್ಲ, ಬದಲಾಗಲೂಬಾರದು ಎಂದು ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ. ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿ ವೇಗಗತಿಯಲ್ಲಿ ನಡೆಯುತ್ತಿದ್ದು, ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕಿದೆ. ಚಿಕ್ಕಮಗಳೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಅತ್ಯಂತ ವೇಗಗತಿಯಲ್ಲಿ ಸಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಬೇಕಿದೆ.

ಭದ್ರಾ ನದಿ ಗೊಂಧೀ ಯೋಜನೆಯ ಮೂಲಕ ಜಿಲ್ಲೆಯ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕಿನ ಕೆರೆಗಳನ್ನು ತುಂಬಿಸುವ ಮೊದಲನೇ ಹಂತದ ಕಾಮಗಾರಿ ಪ್ರಾರಂಭವಾಗಿದ್ದು, ಎರಡನೇ ಹಂತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ. ಚಿಕ್ಕಮಗಳೂರಿನಲ್ಲಿ ನಾನು ಶಾಸಕನಾಗಿದ್ದಾಗ ರಾಜಧರ್ಮವನ್ನು ಪಾಲಿಸಿ ಕೆಲಸವನ್ನು ಮಾಡಿದ್ದೇನೆ. ಚುನಾವಣೆಯಲ್ಲಿ ವಿಭಿನ್ನ ಕಾರಣಗಳಿಗಾಗಿ ವೈಮನಸ್ಸು ಇದ್ದರೂ, ಅದನ್ನು ಅಲ್ಲಿಗೆ ಬಿಟ್ಟು ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕಾರ್ಯ ಮಾಡಿದ್ದೇನೆ. ಆದರೆ, ನಿಮ್ಮ ಪಕ್ಷದ ಕೆಲವರು ಚಿಕ್ಕಮಗಳೂರಿನಲ್ಲಿ ಸುಳ್ಳು ಮೊಕದ್ದಮೆ ದಾಖಲಿಸಿ ಅಮಾಯಕರನ್ನು ಜೈಲಿಗೆ ಕಳುಹಿಸಿ ದ್ವೇಷ ರಾಜಕಾರಣ ಮಾಡುತ್ತಿರುವುದು ವಿಪರ್ಯಾಸ. ರಾಜಧರ್ಮ ಎಲ್ಲರಲ್ಲೂ ಇರಲಿ, ದ್ವೇಷ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯತೆಯಾಗಿರಲಿ. ಅಭಿವೃದ್ಧಿಯ ಕಡೆ ಗಮನ ನೀಡಿ, ಜಿಲ್ಲೆಯ ಅಭಿವೃದ್ಧಿಗಾಗಿ ಒಳ್ಳೆಯ ಕಾರ್ಯಕ್ಕೆ ಸದಾ ಬೆಂಬಲವಿರುತ್ತದೆ ಎಂದು ಹೇಳಿದ್ದಾರೆ.

ಪ್ರಾದೇಶಿಕ ನ್ಯಾಯ ಕೊಟ್ಟಿಲ್ಲ: ಸಚಿವ ಸಂಪುಟದ ರಚನೆಯಲ್ಲಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಪ್ರಾದೇಶಿಕ ನ್ಯಾಯ ಕೊಟ್ಟಿಲ್ಲ. ಹಿಂದೆ ಬಿಜೆಪಿ ಸರ್ಕಾರಕ್ಕೆ ಬಹುಮತ ಇರಲಿಲ್ಲ, ಬೇರೆಯವರಿಗೆ ಕರೆದುಕೊಂಡು ಬಂದಿದ್ದರಿಂದ ಅವರಿಗೆ ಅವಕಾಶ ನೀಡಬೇಕಾಯಿತು. ಕಾಂಗ್ರೆಸ್‌ಗೆ ಬಹುಮತ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ.

ನಮ್ಮ ಜಿಲ್ಲೆಗೆ ಸಚಿವ ಸ್ಥಾನ ಸಿಗದೆ ಇರುವುದು ನಮ್ಮ ಜಿಲ್ಲೆಯ ಜನರಿಗೆ ನಿರಾಶೆಯಾಗಿದೆ. ರಾಜ್ಯದ ಹಲವು ಜಿಲ್ಲೆಯ ಜನರಿಗೂ ನಿರಾಶೆಯಾಗಿದೆ. ಕಾಂಗ್ರೆಸ್ ಸರ್ಕಾರ ೨೦೧೩ರಲ್ಲಿ ಮೆಡಿಕಲ್ ಕಾಲೇಜಿಗೆ ಹಣ ಕೊಡದೆ ಅನ್ಯಾಯ ಮಾಡಿತ್ತು. ಹಾಗಾಗಿ ದೊಡ್ಡ ಮಟ್ಟದ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷದಿಂದ ಅಭಿವೃದ್ಧಿ, ರಾಜಕೀಯವಾಗಿ ನ್ಯಾಯ ಕೊಡಲು ಆಗಿಲ್ಲ. ಇವರಿಗೆ ವೋಟ್ ಕೊಟ್ಟು ತಪ್ಪು ಮಾಡಿದ್ವಾ ಎಂಬುವ ಕಾಲ ದೂರ ಇಲ್ಲ ಎಂದು ಹೇಳಿದರು.

Sneha Gowda

Recent Posts

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

2 mins ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

4 mins ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

16 mins ago

ಮರು ಬಿಡುಗಡೆಯಾಗುತ್ತಿದೆ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’

ಪುನೀತ್ ರಾಜಕುಮಾರ್  ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’  ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

24 mins ago

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…

29 mins ago

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…

32 mins ago