News Karnataka Kannada
Monday, April 29 2024
ಚಿಕಮಗಳೂರು

ಲೋಕಸಭಾ ಚುನಾವಣೆಗೆ ಸಿ.ಟಿ.ರವಿ ಸ್ಪರ್ಧಿಸುವಂತೆ ಮನವಿ

Ct Ravi requested to contest Lok Sabha elections
Photo Credit : News Kannada

ಚಿಕ್ಕಮಗಳೂರು: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಪರ್ಧೆ ಮಾಡುವಂತೆ ಸಿ.ಟಿ.ರವಿ ಅವರನ್ನು ಬಿಜೆಪಿ ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ.ಟಿ.ರವಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕೋರಿ ಪಕ್ಷದ ವರಿಷ್ಠರಿಗೆ ಆಗ್ರಹಿಸಲು ಜಿಲ್ಲೆಯಿಂದ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ.

ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ, ನೀವು ಇಲ್ಲೇ ಸ್ಪರ್ಧೆ ಮಾಡಬೇಕು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಿಲ್ಲೆಯ 5 ಕ್ಷೇತ್ರಗಳಲ್ಲಿ ಸೋತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದೇ ಫಲಿತಾಂಶ ಬಂದರೆ ಪಕ್ಷಕ್ಕೆ ತುಂಬಾ ಹಾನಿಯಾಗಲಿದೆ. ಅಂಥ ಪರಿಸ್ಥಿತಿ ಬರಬಾರದು ಎಂದು ಸಭೆಯಲ್ಲಿ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು