ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಲು ಜಿಲ್ಲಾ ಬಿಜೆಪಿ ಯುವಮೋರ್ಚಾ ಆಗ್ರಹ

ಚಿಕ್ಕಮಗಳೂರು: ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರಆಟೋಚಾಲಕರ ಬಳಿ ಮತದಾನ ಜಾಗೃತಿಕಾರ್ಯಕ್ರಮ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಚುನಾವಣಾಧಿಕಾರಿ ಮೇನಕಾ ವಿ.ಚೌಹಾಣ್‌ ಅವರನ್ನು ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದುಜಿಲ್ಲಾ ಬಿಜೆಪಿ ಯುವ ಮೋರ್ಚಾ ಒತ್ತಾಯಿಸಿದೆ.

ಮಾ.೨೬ ರಂದು ಬೆಳಗ್ಗೆ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಕಾರ್ಯಕರ್ತರ ತಂಡ ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರಆಟೋ ಚಾಲಕರೊಂದಿಗೆ ಮತದಾನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಎಎಸ್ಪಿ ನೇತೃತ್ವದ ಪೊಲೀಸ್‌ ತಂಡ ಆಗಮಿಸಿ ಏಕಾಏಕಿ ಯುವ ಮೋರ್ಚಾಕಾರ್ಯಕರ್ತರನ್ನು ಬಂಧಿಸಿರುವುದನ್ನು ಜಿಲ್ಲಾಯುವ ಮೋರ್ಚಾ ಖಂಡಿಸುತ್ತದೆ ಎಂದು ಗುರುವಾರ ಜಿಲ್ಲಾ ಚುನಾವಣಾಧಿಕಾರಿಗೆ ನೀಡಿರುವ ಮನವಿಯಲ್ಲಿಜಿಲ್ಲಾ ಬಿಜೆಪಿ ಯುವ ಮೋರ್ಚಾಅಧ್ಯಕ್ಷ ಸಂತೋಷ್‌ಕೋಟ್ಯಾನ್ ತಿಳಿಸಿದ್ದಾರೆ.

ಮತದಾನದ ಮಹತ್ವ, ಮತದಾನ ಮಾಡುವ ಉದ್ದೇಶ ಸೇರಿದಂತೆ ಮತದಾನದ ಬಗ್ಗೆ ಜಾಗೃತಿ ಮೂಡಿಸು ವಕಾರ್ಯ ಶಾಂತಿಯುತವಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ತಮ್ಮ ಕೈಯಲ್ಲಿ ಹಿಡಿದಿದ್ದ ದೇಶದ ಹೆಮ್ಮಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವನ್ನುಒತ್ತಾಯಪೂರ್ವಕವಾಗಿ ಪೊಲೀಸರು ವಶಕ್ಕೆ ಪಡೆದುಕೊಳ್ಳುವ ಮೂಲಕ ಜಿಲ್ಲಾಡಳಿತ ಒಂದು ಪಕ್ಷದ ಪರವಾಗಿ ಏಕಪಕ್ಷೀಯವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ನಗರಪೊಲೀಸ್‌ಠಾಣೆಯಲ್ಲಿಕ್ರೈಂ ನಂ.೫೧/೨೦೨೪ ರಅಡಿಯಲ್ಲಿ ಕಲಂ ೧೮೮ ಐಪಿಸಿ ಪ್ರಕಾರಯುವ ಮೋರ್ಚಾಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿದ್ದು, ಸದರಿ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ನೊಂದಾಯಿಸಿರುವುದಿಲ್ಲ. ಆದರೆ, ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೆಂದು ಉಲ್ಲೇಖಿಸಲಾಗಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.

ಇಷ್ಟೆಲ್ಲ ಘಟನೆಗಳಿಗೆ ಚುನಾವಣಾಧಿಕಾರಿ ಮೇನಕಾ ವಿ.ಚೌಹಾಣ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸಿರುವುದು ಕಾರಣವಾಗಿರುತ್ತದೆ. ಸುಳ್ಳು ಪ್ರಕರಣ ದಾಖಲಿಸಲು ಕಾರಣರಾಗಿರುವ ಈ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಚುನಾವಣಾ ಕಾರ್ಯಗಳು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಅವರನ್ನು ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಯುವ ಮೋರ್ಚಾಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಯುವ ಮೋರ್ಚಾಉಪಾಧ್ಯಕ್ಷೆಅಂಕಿತಾ, ಪ್ರಧಾನ ಕಾರ್ಯದರ್ಶಿ ಸಚಿನ್, ಕಾರ್ಯದರ್ಶಿ ಶಶಿ ಆಲ್ದೂರು, ಖಜಾಂಚಿ ಭರತ್, ನಗರಯುವ ಮೋರ್ಚಾಅಧ್ಯಕ್ಷಜೀವನ್‌ಕೋಟೆ, ಪ್ರಧಾನ ಕಾರ್ಯದರ್ಶಿಗೌತಮ್‌ಅಟಕ್, ಪುನಿತ್, ಪ್ರಮುಖರಾದ ಮಂಜುನಾಥ್, ಮಧು, ಪ್ರಶಾಂತ, ಪಾರ್ಥಿಬನ್, ಕಾರ್ತಿಕ್ ಉಪಸ್ಥಿತರಿದ್ದರು.

Ashika S

Recent Posts

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

11 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

14 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

25 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

32 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

49 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago