ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಅವಕಾಶ ನೀಡಲು ಜಿಲ್ಲಾ ಕೈ ಮುಖಂಡರ ಆಗ್ರಹ

ಚಿಕ್ಕಮಗಳೂರು: ಮಾಜಿ ಸಚಿವ, ಪಕ್ಷದ ಹಿರಿಯ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ರಾಜ್ಯದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷದ ವರಿಷ್ಠರು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

ಕೆಪಿಸಿಸಿ ಸಂಯೋಜಕ, ಡಿಸಿಸಿ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಂಸದ ದೃವನಾರಾಯಣ ಅವರ ಅಕಾಲಿಕ ಮರಣ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಮೈಸೂರು ಜಿಲ್ಲೆ ನಂಜನಗೂಡು ಮೀಸಲು ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಯಾಗಿದ್ದರು.

ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಕೂಡ ಅದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇವರು ಸಿದ್ದರಾಮಯ್ಯ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ.ದಲಿತ ಸಮುದಾಯಕ್ಕೆ ಸ್ಪಂದಿಸಿ ಜನಾನುರಾಗಿಯಾಗಿದ್ದಾರೆ. ದೃವನಾರಾಯಣ ಅವರ ಪುತ್ರ ದರ್ಶನ್ ಅವರಿಗೆ ನಂಜನಗೂಡು ಕ್ಷೇತ್ರ ಬಿಟ್ಟುಕೊಟ್ಟು ಔದಾರ್ಯ ತೋರಿದ್ದಾರೆ.

ಈ ಹಿನ್ನೆಲೆಯಲ್ಲಿ ಎಚ್.ಸಿ.ಮಹ ದೇವಪ್ಪ ಅವರಿಗೆ ರಾಜ್ಯದ ಯಾವು ದಾದರು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಆಗ್ರಹಿಸುತ್ತಿದ್ದೇವೆ ಎಂದರು.

ಮುಖಂಡರಾದ ಆನಂದ್, ಓಂಪ್ರಕಾಶ್, ಸುರೇಶ್, ಜಗದೀಶ್, ಶಾಂತಕುಮಾರ್ ಮತ್ತಿತರರಿದ್ದರು.

Gayathri SG

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

4 seconds ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

7 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

20 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

23 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

34 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

41 mins ago