News Karnataka Kannada
Tuesday, May 07 2024
ಚಿಕಮಗಳೂರು

ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ

More than 12 districts receive rainfall for two days
Photo Credit : Pixabay

ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ರಾತ್ರಿ ೭ ಗಂಟೆಗೆ ಪ್ರಾರಂಭವಾದ ಮಳೆ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಬಣಕಲ್, ಕೊಟ್ಟಿಗೆಹಾರ, ತರುವೆ, ಬಿನ್ನಡಿ, ಅತ್ತಿಗೆರೆ, ಬಗ್ಗಸಗೋಡು, ಫಲ್ಗುಣಿ, ಹೊರಟ್ಟಿ, ಬಿದರಹಳ್ಳಿ ಮುಂತಾದ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.

ಕಾಫಿ ಬೆಳೆಗಾರರು ಮುಂದಿನ ವರ್ಷದ ಪಸಲಿಗಾಗಿ ತೋಟಕ್ಕೆ ನೀರು ಹಾಯಿಸುವ ಸಿದ್ದತೆಯಲ್ಲಿದ್ದರು. ಬಹುತೇಕ ಬೆಳೆಗಾರರು ಕಾಫಿ ತೋಟಕ್ಕೆ ನೀರು ಹಾಯಿಸಿದ್ದರು. ದಿಡೀರ್ ಮಳೆ ಸುರಿದಿರುವುದು ಸಾವಿರಾರು ರೂ ವೆಚ್ಚ ಮಾಡಿ ತೋಟಕ್ಕೆ ನೀರು ಹಾಯಿಸುವುದು ತಪ್ಪಿದಂತಾಗಿದೆ. ಇದರಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ಮಳೆಯಿಂದಾಗಿ ತಂಪೆರದಂತಾಗಿದ್ದು ಚಾರ್ಮಾಡಿ ಘಾಟ್‌ನಲ್ಲಿ ಸುರಿದ ಮಳೆಯಿಂದಾಗಿ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು