News Karnataka Kannada
Friday, May 10 2024
ಚಿಕಮಗಳೂರು

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿದ್ದೇನೆ: ಕಡೂರು ಸಿ. ನಂಜಪ್ಪ

I have asked for Congress ticket from Kadur assembly constituency: Kadur C Nanjappa
Photo Credit : News Kannada

ಚಿಕ್ಕಮಗಳೂರು: ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿದ್ದೇನೆ, ಕೊಟ್ರೆ ಸ್ಪರ್ಧೆ ಮಾಡ್ತೀನಿ, ಇಲ್ಲದಿದ್ರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕಡೂರು ಸಿ. ನಂಜಪ್ಪ ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಳೆದ ೫೨ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದಿದ್ದೇನೆ ಎಂದರು.

ನಾನು ಟಿಕೆಟ್ ನೀಡುವಂತೆ ಕೋರಿ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಆದರೆ, ಜೆಡಿಎಸ್‌ನಿಂದ ಬಂದಿರುವ ವೈಎಸ್‌ವಿ ದತ್ತ ಅವರಿಗೆ ಟಿಕೆಟ್ ನೀಡುವ ವಿಷಯವನ್ನು ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದೆ. ಇತ್ತೀಚೆಗೆ ಬಂದಿರುವ ವೈಎಸ್‌ವಿ ದತ್ತ ಅವರಿಗೆ ಟಿಕೆಟ್ ನೀಡುವುದಾದರೆ ೫೨ ವರ್ಷಗಳಿಂದ ಪಕ್ಷಕ್ಕಾಗಿ ದುಡಿದವರು ನಾವುಗಳು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ವೈಎಸ್‌ವಿ ದತ್ತ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಕೇಳಿರುವ ನಾವು, ಇದೀಗ ದತ್ತರವರ ಪರವಾಗಿ ಮತ ಕೇಳುವುದು ಹೇಗೆ ಎಂದು ಪ್ರಶ್ನಿಸಿದ ಅವರು, ದತ್ತ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದರೆ ಕಡೂರು ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ೭೭,೦೦೦ ಮತದಾರರು ಇದ್ದಾರೆ, ಓಬಿಸಿ ೬೫,೫೦೦, ಅಲ್ಪಸಂಖ್ಯಾತರು ೨೮,೫೦೦, ಪರಿಶಿಷ್ಟ ವರ್ಗ ೪,೫೦೦, ಲಿಂಗಾಯತ, ರೆಡ್ಡಿ ಸಮುದಾಯ, ಒಕ್ಕಲಿಗರು, ಬ್ರಾಹ್ಮಣ ಸಮುದಾಯದವರು ೫೧,೦೦೦ ಮತದಾರರು ಇದ್ದಾರೆ ಎಂದರು.

ಕರ್ನಾಟಕ ರಾಜ್ಯ ಕೊರಮ, ಕೊರಚ, ಕೊರವರ್, ಕೊರಮನ್, ಯರಕುಲ, ಭಜಂತ್ರಿ, ಕೊರಮಶೆಟ್ಟಿ ರಾಜಕೀಯ ವೇದಿಕೆಯ ರಾಜ್ಯ ಉಪಾಧ್ಯಕ್ಷ ಎನ್. ಮೋಹನ್‌ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕಾಗಿ ೫೨ ವರ್ಷಗಳಿಂದ ದುಡಿದ ಕಡೂರು ಸಿ. ನಂಜಪ್ಪ ಅವರಿಗೆ ಈ ಬಾರಿ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ನಮ್ಮ ಜನಾಂಗ ರಾಜ್ಯದಲ್ಲಿ ೩೫ ಲಕ್ಷ ಜನಸಂಖ್ಯೆ ಹೊಂದಿದ್ದರೂ ಅeತ ಜಾತಿಗಳಾಗಿಯೇ ಬದುಕುತ್ತಿವೆ. ಆರ್ಥಿಕ, ಸಾಮಾಜಿಕ, ರಾಜಕೀಯ ನ್ಯಾಯ ನಮಗಿನ್ನೂ ಸಿಕ್ಕಿಲ್ಲ, ಅರ್ಹತೆ ಇದ್ದರೂ ಅವಕಾಶವಿಲ್ಲ ಎನ್ನುವಂತಾಗಿದೆ. ಇವತ್ತಿನ ಎಲ್ಲಾ ರಾಜಕೀಯ ಪಕ್ಷಗಳು ಅರಿಯಬೇಕಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು