News Karnataka Kannada
Monday, May 13 2024
ಚಿಕಮಗಳೂರು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು: ಜಿ. ಪ್ರಭು

In a democratic set up, the voters are the masters: G. Lord
Photo Credit : News Kannada

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು, ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮಹತ್ವವಿದ್ದು, ೧೮ ವರ್ಷ ತುಂಬಿದ ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಿ ಸದೃಢ ಸರ್ಕಾರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಜಿ. ಪ್ರಭು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ, ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಿನ್ನೆ ರಾತ್ರಿ ಕೆ.ಎಂ. ರಸ್ತೆಯಲ್ಲಿ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಮತದಾನ ಇದೇ ಮೇ ೧೦ ರಂದು ಜರುಗಲಿದೆ. ಎಲ್ಲರೂ ತಪ್ಪದೇ ತಮಗೆ ನೀಡಲಾದ ಮತದಾನ ಹಕ್ಕನ್ನು ಚಲಾಯಿಸಿ ಸುಭದ್ರ ಸರ್ಕಾರಕ್ಕೆ ಮುಂದಾಗಬೇಕು. ಕಡ್ಡಾಯ ಮತದಾನ ನಮ್ಮ ಹಕ್ಕು ಎಂದರು.

ಭಾರತದಲ್ಲಿ ಚುನಾವಣೆ ಪಾತ್ರ ಬಹು ಮಹತ್ವದ್ದು, ನಿಮಗೆ ಬೇಕಾದ ಅಭ್ಯರ್ಥಿಗೆ ಮತ ಹಾಕುವ ಸ್ವಾತಂತ್ರ್ಯ ಮತದಾರರಿಗಿದೆ. ಮತ ಹಾಕಲು ಯಾರು ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ ರಾಜ್ಯದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರು ತಪ್ಪದೆ ಮತ ಚಲಾಯಿಸಿ, ಜಗತ್ತಿನಲ್ಲಿಯೇ ಅತೀ ದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಮಹತ್ವ ಹೊಂದಿದೆ. ಮತದಾರ ಜಾಗೃತನಾದರೆ ದೇಶದ ಭವಿಷ್ಯ ಉತ್ತಮ ದಿಕ್ಕಿನಲ್ಲಿ ಮುನ್ನಡೆಯುತ್ತದೆ. ಜನರಿಗಾಗಿ ಇರುವ ಸರ್ಕಾರವನ್ನು ಜನರೇ ಆಯ್ಕೆ ಮಾಡುವ ಹಕ್ಕಿರುವುದು ನಮ್ಮ ಸಂವಿಧಾನದ ಮೌಲ್ಯವಾಗಿದೆ. ಪ್ರತಿಯೊಬ್ಬರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಎಂದು ತಿಳಿಸಿದರು.ಪಂಜಿನ ಮೆರವಣಿಗೆಯು ಕೆ.ಎಂ. ರಸ್ತೆಯಿಂದ ಮಾರ್ಕೆಟ್ ರಸ್ತೆ ಮುಖಾಂತರ ಆಜಾದ್ ಪಾರ್ಕ್ ತಲುಪಿ. ನಂತರ ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಜಾಥಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ ಶಿವಾನಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳ ಹುಲ್ಲಹಳ್ಳಿ, ಬಿ.ಸಿ.ಎಂ. ಅಧಿಕಾರಿ ಸೋಮಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಜಿ.ಟಿ. ವೀರೇಶ್ ಕುಮಾರ್. ನಗರಸಭೆ ಮತ್ತು ಜಿಲ್ಲಾ ಮಟ್ಟದ ಇತರೆ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು