News Karnataka Kannada
Sunday, May 05 2024
ಚಿಕಮಗಳೂರು

ಚಿಕ್ಕಮಗಳೂರು: ವೈ.ಎಸ್.ವಿ ದತ್ತ ಸೋಲಿಸಲು ಜೆ.ಡಿ.ಎಸ್. ಮಾಸ್ಟರ್ ಪ್ಲಾನ್..!

Mandya: JD(S) launches operation in mandya district
Photo Credit : News Kannada

ಚಿಕ್ಕಮಗಳೂರು : ದೇವೇಗೌಡರ ಮಾನಸ ಪುತ್ರನಂತಿದ್ದ ವೈ.ಎಸ್.ವಿ ದತ್ತಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಬೆನ್ನಲ್ಲೇ ವೈ.ಎಸ್.ದತ್ತಾ ಸೋಲಿಸಲು ಜೆಡಿಎಸ್ ಮಾಸ್ಟರ್ ಪ್ಲಾನ್ ಮಾಡಿದೆ ಎಂಬ ಕೂಗು ಕೇಳಿ ಬರುತ್ತಿದೆ. ಇಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಸಿ.ಎಂ.ದನಂಜಯ ಅವರನ್ನು ತನ್ನ ಅಭ್ಯರ್ಥಿ ಎಂದು ಜೆಡಿಎಸ್ ಘೋಷಣೆ ಮಾಡಿಕೊಂಡಿದೆ. ಈ ಮೂಲಕ ಕಾಂಗ್ರೆಸ್‌ನಲ್ಲಿದ್ದ ಅಭ್ಯರ್ಥಿಯನ್ನು ಜೆಡಿಎಸ್‌ಗೆ ಎಳೆದು ತಂದು ಅಭ್ಯರ್ಥಿ ಮಾಡುವ ಮೂಲಕ ದತ್ತಾಗೆ ಟಾಂಗ್ ನೀಡಲು ಜೆಡಿಎಸ್ ಮುಂದಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಬೆಳ್ಳಿ ಪ್ರಕಾಶ್ ಈ ಬಾರಿಯೂ ಬಿಜೆಪಿಯಿಂದ ಕಣ್ಕಕೆ ಇಳಿಯಲಿದ್ದು, ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳುವ ಸಾಹಸದಲ್ಲಿದ್ದಾರೆ. ಇಷ್ಟು ವರ್ಷ ಜೆಡಿಎಸ್ ಜೊತೆಗಿದ್ದ ವೈಎಸ್‌ವಿ ದತ್ತ ತೆನೆ ಇಳಿಸಿ ಕಾಂಗ್ರೆಸ್ ಸೇರಿದ್ದಾರೆ. ಇನ್ನು, ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಎಂ ಧನಂಜಯ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.

ಚಿಕ್ಕಮಗಳೂರಿನಲ್ಲಿದ್ದರೂ ಬಯಲು ಸೀಮೆಯ ಭಾಗವಾಗಿರುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಈ ಭಾರಿ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಒಂದು ಕಾಲದಲ್ಲಿ ಜಾತ್ಯಾತೀತ ಜನತಾದಳದ ಭದ್ರಕೋಟೆಯಾಗಿದ್ದ ಕಡೂರು, ಈಗ ಬಿಜೆಪಿಗೆ ತನ್ನ ಸ್ಥಾನ ಬಿಟ್ಟುಕೊಟ್ಟಿದೆ.

ತಮ್ಮ ವೈಯಕ್ತಿಕ ವರ್ಚಸ್ಸಿನಿಂದಲೇ ಕೆಎಂ ಕೃಷ್ಣಮೂರ್ತಿ ಜನತಾ ದಳ, ಜೆಡಿಎಸ್, ಕಾಂಗ್ರೆಸ್‌ನಿಂದಲೂ ಸ್ಪರ್ಧಿಸಿ ಗೆಲುವು ಸಾಧಿಸಿ ಇಲ್ಲಿ ಇತಿಹಾಸ ಬರೆದಿದ್ದಾರೆ. ಚುನಾವಣೆ ಗೆಲುವಿಗೆ ಮೂರು ಪಕ್ಷಗಳ ತಯಾರಿ ಜೆಡಿಎಸ್‌ನ ಪ್ರಭಾವಿ ನಾಯಕ ಎಂದು ಗುರುತಿಸಿ ಕೊಂಡಿದ್ದ ಮಾಜಿ ಶಾಸಕ ವೈ. ಎಸ್. ವಿ. ದತ್ತ (ಯಗಟಿ ಸೂರ್ಯನಾರಾಯಣ ವೆಂಕಟೇಶ ದತ್ತ) ಈ ಬಾರಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್‌ನಿಂದ ಚುನಾವಣೆಗೆ ಇಳಿಯಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಚಿಕ್ಕದಿದ್ದರೂ ಕೂಡ ಟಿಕೆಟ್‌ಗಾಗಿ ಪೈಪೋಟಿಯಂತೂ ಇದೆ. ಕಳೆದ ವಿಧಾನಸಭಾ ಚುನಾವಣೆ ಎದುರಿಸಿದ್ದ ಕೆಎಸ್ ಆನಂದ್ ನಿರಂತರವಾಗಿ ಕ್ಷೇತ್ರದಲ್ಲಿ ಜನರ ಜೊತೆಗೆ ಬೆರಯುವ ಕೆಲಸ ಮಾಡುತ್ತಿದ್ದಾರೆ. ಇವರ ಜೊತೆಗೆ ಹಿರಿಯ ಕಾಂಗ್ರೆಸ್ ಮುಖಂಡ ಕೆಎಂ ವಿನಾಯಕ, ಮಾಜಿ ಶಾಸಕ ಕೆಎಂಕೆ ಪುತ್ರ ಶರತ್ ಕೃಷ್ಣ ಮೂರ್ತಿ ಸಹ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ.

ಆದರೆ, ೨೦೧೩ರ ಚುನಾವಣೆಯಲ್ಲಿ ಭರ್ಜರಿ ಜಯಗಳಿದ್ದು, ಕಳೆದ ೨೦೧೮ರ ಚುನಾವಣೆಯಲ್ಲಿ ೪೬,೮೬೦ ಮತಗಳನ್ನು ಪಡೆದು ಸೋಲು ಅನುಭವಿಸಿರುವ ವೈ. ಎಸ್. ವಿ. ದತ್ತ ಕೂಡ ಸ್ಪರ್ಧೆಯಲ್ಲಿದ್ದಾರೆ ಎನ್ನಲಾಗಿದೆ. ೨೦೧೮ರ ಚುನಾವಣೆಯಲ್ಲಿ ಗೆಲುವ ಸಾಧಿಸಿರುವ ಬಿಜೆಪಿ ಈ ಬಾರಿಯು ತನ್ನ ಹಾಲಿ ಶಾಸಕ ಮತ್ತು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿಯೂ ಗುರುತಿಸಿಕೊಂಡಿರುವ ಬೆಳ್ಳಿ ಪ್ರಕಾಶ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಪ್ರಭಾವಿ ನಾಯಕ ವೈಎಸ್‌ವಿ ದತ್ತ ವಿರುದ್ಧ ಗೆಲುವು ಸಾಧಿಸಿದ್ದರು. ಹೀಗಾಗಿ ಈ ಬಾರಿಯೂ ಟಿಕೆಟ್ ಗಟ್ಟಿ ಎಂಬ ನಿರೀಕ್ಷೆಯಲ್ಲಿ ಕ್ಷೇತ್ರದಲ್ಲಿ ಬಿರುಸಿನ ಓಡಾಟ, ಪ್ರಚಾರ ನಡೆಸುತ್ತಿದ್ದಾರೆ. ಇನ್ನೂ ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗೆ ಪೈಪೋಟಿ ಇಲ್ಲದ ಕಾರಣ ಅವರ ನಂಬಿಕೆ ಕೂಡ ಗಟ್ಟಿಯಾಗಿದೆ. ಹಾಸನದ ಪ್ರಭಾವಿರುವ ಕ್ಷೇತ್ರವಾದ ಕಾರಣ ಇದು ಜೆಡಿಎಸ್ ಭದ್ರಕೋಟೆ ಎನ್ನಲಾಗುತ್ತಿತ್ತು. ಆದರೆ ಕಳೆದ ಬಾರಿ ಇಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲು ಮತ್ತು ಈ ಬಾರಿ ತಮ್ಮ ಪ್ರಭಾವಿ ನಾಯಕ ಪಕ್ಷಾಂತರವಾಗಿರುವುದು ಜೆಡಿಎಸ್‌ಗೆ ಪೆಟ್ಟು ನೀಡಿದೆ.

ಹೀಗಾಗಿ ಈ ಬಾರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಸಿ.ಎಂ. ಧನಂಜಯ ಅವರನ್ನು ಘೋಷಿಸಿದೆ. ಇದು ಭಾರೀ ಅಚ್ಚರಿಗೆ ಕಾರಣವಾಗಿದೆ. ಜೆಡಿಎಸ್ ಅಭ್ಯರ್ಥಿ ಸಿ.ಎಂ. ಧನಂಜಯ ಅವರು ಬೆಂಗಳೂರಿನ ಚನ್ನ ಸಂದ್ರದವರು. ಇವರು ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ, ಜೆಡಿಎಸ್ ಚಟುವಟಿಕೆಗಳಲ್ಲಿ ಹಿಡಿತ ಸಾಧಿಸಿರುವ ಶಾಸಕ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ಅವರು ಮುಖಂಡರ ಸಮ್ಮುಖದಲ್ಲಿ ಕಡೂರು ಕ್ಷೇತ್ರದ ಅಭ್ಯರ್ಥಿ ಯನ್ನಾಗಿ ಸಿ.ಎಂ. ಧನಂಜಯ ಅವರನ್ನು ಘೋಷಣೆ ಮಾಡಿ ಅಚ್ಚರಿಗೆ ಕಾರಣವಾಗಿದ್ದಾರೆ.

ವೈ.ಎಸ್.ವಿ. ದತ್ತ ಅವರನ್ನು ಸೋಲಿಸಲು ಜೆಡಿಎಸ್ ಪಣತೊಟ್ಟಿದೆ. ಅಚ್ಚರಿಯೆಂದರೆ, ಧನಂಜಯ ಕುರುಬ ಸಮುದಾಯದವ ರಾಗಿದ್ದು, ಸಿದ್ದರಾಮಯ್ಯ ಅವರ ಬೆಂಬಲಿಗರಾಗಿದ್ದರು. ಇನ್ನು, ಈ ಕ್ಷೇತ್ರದಲ್ಲಿ ಪಕ್ಷಕ್ಕಿಂತ ಸ್ವಂತ ವರ್ಷಸ್ಸು ಹೆಚ್ಚು ಕೆಲಸ ಮಾಡುತ್ತದೆ ಎಂಬ ನಂಬಿಕೆಯಿದೆ. ಇದಕ್ಕೆ ಸಾಕ್ಷಿಯಾಗಿ ನಾಲ್ಕು ಬಾರಿ ಕೆಎಂ ಕೃಷ್ಣಮೂರ್ತಿ ಗೆಲುವು ಸಾಕ್ಷಿಯಾಗಿದೆ. ೧೯೯೪, ೧೯೯೯, ೨೦೦೪ ಮತ್ತು ೨೦೦೮ರಲ್ಲಿ ಕೆ.ಎಂ. ಕೃಷ್ಣಮೂರ್ತಿ ಗೆಲುವು ದಾಖಲಿಸಿದ್ದಾರೆ. ಅವರನ್ನು ಕ್ಷೇತ್ರದಲ್ಲಿ ಚಾಣಕ್ಯ ಎಂದು ಕರೆಯಲಾಗುತ್ತದೆ. ಆದರೆ ಈ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಯಾರು ಚಾಣಕ್ಯರಾಗಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು