ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ. ಕೆಎಸ್ಆರ್ಟಿಸಿ ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ 9 ಮಂದಿ ಗಂಭೀರವಾಗಿ ಗಾಯಾಗೊಂಡಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರಗೆ ದಾಖಲಿಸಲಾಗಿದೆ.