ಅವರಪ್ಪನ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದ ಸಿ.ಟಿ ರವಿ

ಚಿಕ್ಕಮಗಳೂರು: ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಮತಾ ಬ್ಯಾನರ್ಜಿ ಬೆಂಬಲಿಸಿದ್ದರು. ಇದಕ್ಕೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದು ಹಳೇ ಸುದ್ದಿ. ಇದೀಗ ಈ ಕುರಿತು ಬಿಜೆಪಿ ಮುಖಂಡ ಸಿ.ಟಿ ರವಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಕಾಂಗ್ರೆಸ್ ದಲಿತರನ್ನ ಬರೀ ಹೇಳೋಕೆ,ತೋರಿಸೋಕೆ ಇಟ್ಟುಕೊಂಡಿದೆ ಅಷ್ಟೆ. ಇಂದಿನ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಅವರಪ್ಪನಾ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದ ರವಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಇಂತಹಾ ಸ್ಥಿತಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಮಾಡ್ತೀವಿ ಅಂದ್ರೆ, ಮಾಡಲ್ಲ. ಮೂರು ಲೋಕಕ್ಕೂ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಅಧ್ಯಕ್ಷರನ್ನಾಗಿ ಮಾಡಲಿ. ಪಾತಾಳ, ದೇವ, ಭೂಲೋಕ ಮೂರಕ್ಕೂ ಅವರನ್ನೇ ಮಾಡಲಿ ಎಂದರು.

ಮೆಜಾರಿಟಿ ಬಂದಾಗ ಮಾಡಿದ್ದಾರಾ.? ಕರ್ನಾಟಕಲ್ಲಿ ಮೆಜಾರಿಟಿ ಇದ್ದಾಗ ಸಿಎಂ ಮಾಡಿದ್ರಾ? ಏಕೆ ಪರಮೇಶ್ವರ್ ಅವರನ್ನ ಸಿಎಂ ಮಾಡಬಾರದಿತ್ತು. ದಲಿತರನ್ನ ಕಾಂಗ್ರೆಸ್ ಬರೀ ತೋರಿಸಕ್ಕೆ, ಹೇಳಕ್ಕೆ ಇಟ್ಕಂಡಿದೆ ಅಷ್ಟೆ. ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಮುಖ್ಯಮಂತ್ರಿಯನ್ನೇ ಮಾಡ್ಲಿಲ್ಲ. ಪ್ರಧಾನಿ ಮಾಡುತ್ತಾರಾ ಎಂದು ಪ್ರಶ್ನಿಸಿದ ಅವರು, ಪರಮೇಶ್ವರ್ ಅವರು ಎಲ್ಲಿ ಸಿಎಂ ಆಗ್ತಾರೋ ಅಂತ ಷಡ್ಯಂತ್ರ, ಹಣ, ಜಾತಿಯಿಂದ ಸೋಲಿಸಿದರು ಎಂದು ವಿವರಿಸಿದರು.

Ashika S

Recent Posts

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

7 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

15 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

30 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

56 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

1 hour ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

2 hours ago