ಚಿಕ್ಕಮಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ. ಮತ್ತೊಂದೆಡೆ ಮನೆ ಮುಂದೆ ನಿಂತಿದ್ದ ಸ್ಥಳದಲ್ಲಿಯೇ ಧರೆ ಕುಸಿತವಾಗಿದ್ದು, ಕೂದಲೆಳೆ ಅಂತರದಲ್ಲಿ ಎನ್. ಆರ್. ಪುರ ತಾಲೂಕಿನ ಮೇಲ್ಪಾಲ್ ಮೂಲದ ಶಶಿಕುಮಾರ್ ಪಾರಾಗಿದ್ದಾರೆ.
ಧರೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ಜಾಗದಿಂದ ತಕ್ಷಣ ಹಿಂದೆ ಬಂದಿದ್ದರಿಂದ ಅನಾಹುತ ತಪ್ಪಿದೆ. ಎರಡು ದಿನದಿಂದ ಮೇಲ್ಪಾಲ್ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದ ಹಿನ್ನಲೆ ಈ ಘಟನೆ ನಡೆದಿದೆ.