News Karnataka Kannada
Monday, April 22 2024
Cricket
ಚಿಕಮಗಳೂರು

ಮಾದರಿ ನೀತಿ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು: ಜಿಲ್ಲಾಧಿಕಾರಿ ಮೀನಾ ನಾಗರಾಜ್

೨೦೨೪ರ ಲೋಕಸಭಾ ಚುನಾವಣೆಯನ್ನು ಮುಕ್ತ ನ್ಯಾಮ ಸಮ್ಮತ ಮತ್ತು ಶಾಂತಿ ಸುವ್ಯವಸ್ಥಿತೆಯೊಂದಿಗೆ ಯಶಸ್ವಿಯಾಗಿ ನಡೆಯಲು ಮಾದರಿ ನೀತಿ ಸಂಹಿತೆ ಅನುಷ್ಠಾನಾಧಿ ಕಾರಿಗಳು ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ಪಾಲಿ ಸುವುದರ ಮೂಲಕ ತಮ್ಮ ಕರ್ತವ್ಯ ಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಹೇಳಿದ್ದಾರೆ.
Photo Credit : NewsKarnataka

ಚಿಕ್ಕಮಗಳೂರು: ೨೦೨೪ರ ಲೋಕಸಭಾ ಚುನಾವಣೆಯನ್ನು ಮುಕ್ತ ನ್ಯಾಮ ಸಮ್ಮತ ಮತ್ತು ಶಾಂತಿ ಸುವ್ಯವಸ್ಥಿತೆಯೊಂದಿಗೆ ಯಶಸ್ವಿಯಾಗಿ ನಡೆಯಲು ಮಾದರಿ ನೀತಿ ಸಂಹಿತೆ ಅನುಷ್ಠಾನಾಧಿ ಕಾರಿಗಳು ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ಪಾಲಿ ಸುವುದರ ಮೂಲಕ ತಮ್ಮ ಕರ್ತವ್ಯ ಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಮಾದರಿ ನೀತಿ ಸಂಹಿತೆ ಸಂಬಂ ಧಿಸಿದ ಅನುಷ್ಠಾನಾಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು. ಜಿಲ್ಲೆಯಲ್ಲಿ ಈಗಾಗಲೇ ಚೆಕ್ ಪೊಸ್ಟ್‌ಗಳನ್ನು ತೆರೆದು ಸಿಸಿ ಕ್ಯಾಮರ, ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದರು.

ಚೆಕ್ ಪೊಸ್ಟ್‌ಗಳಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದ್ದು, ಇಲ್ಲಿ ನಡೆಯುವ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಲು ನೋಡಲ್ ಅಧಿಕಾರಿ ಗಳ ಜಾಗೃತಿ ತಂಡ ಕೂಡ ಕೆಲಸ ನಿರ್ವಹಿಸಲಿದ್ದು, ಸರಕು ವಾಹನಗಳು ಸೇರಿದಂತೆ ಜಿಲ್ಲೆಯಲ್ಲಿ ಅಬಕಾರಿ ತನಿಖಾ ತಂಡಗಳು ಕೂಡ ರಚಿಸಲಾಗಿದೆ ಎಂದರು.

ಆದಾಯ ತೆರಿಗೆ, ಐ.ಟಿ. ಇಲಾಖೆಗಳು ತಮ್ಮ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದು, ಎಲ್ಲ ಬ್ಯಾಂಕು ವಹಿವಾಟು ನಡೆಯುವ ಬ್ಯಾಂಕ್ ಖಾತೆಗಳನ್ನು ನಿರ್ವಹಿಸುವ ಮತ್ತು ಹೆಚ್ಚು ಹಣ ವಹಿವಾಟು ನಡೆಸುವ ಅಕೌಂಟ್ ಗಳ ಬಗ್ಗೆ ನಿಗಾ ಇಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾದರಿ ಸಂಹಿತೆ ಅಧಿಕಾರಿಗಳ ತಂಡ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದ ಅವರು ಭದ್ರಾ, ವೈಲ್ಡ್ ಲೈಫ್, ಆನೆ ಕಾರಿಡಾರ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮತಗಟ್ಟೆಗಳಲ್ಲಿ ವಾಸಿ ಸುವ ಹಾಗೂ ಮತದಾನದ ದಿನದಂತೆ ಯಾವುದೇ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಅಲ್ಲಿ ವಾಸಿಸುವ ಪ್ರದೇಶದ ಜನರಿಗೆ ರಕ್ಷಣೆ ನೀಡುವುದು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು.

ಪ್ರಾಣಿಗಳಿಂದ ಹೆಚ್ಚು ಅಪಾಯವಿರುವ ಸ್ಥಳಗಳನ್ನು ಗುರುತಿಸಿ ಈಗಿಂದಲೇ ಅದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮ್ಟೆ ಸೇರಿದಂತೆ ಅನುಷ್ಠಾ ನಾಧಿಕಾರಿ ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು