ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ ವೃದ್ಧ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 79ವರ್ಷದ ವೃದ್ಧನನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಕೊನೆಯುಸಿರೆಳೆದಿದ್ದಾರೆ. ರೆಡ್ ಝೋನ್ನಲ್ಲಿ ತಪಾಸಣೆ ಮಾಡಿದಾಗ ವೃದ್ಧನಲ್ಲಿ ಕೆಎಫ್ಡಿ ಪತ್ತೆಯಾಗಿದೆ.
ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದೆ. ಇದೀಗ ಜಿಲ್ಲಾಡಳಿತ ಕಾಯಿಲೆ ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಪರದಾಡುತ್ತಿದೆ.