ಮೂಡಿಗೆರೆ: ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ- ಜಿ.ಹೆಚ್.ಹಾಲಪ್ಪ ಗೌಡ

ಮೂಡಿಗೆರೆ: ಮೂಡಿಗೆರೆ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ದಿಸಲು ಬಾರಿ ಪೈಪೋಟಿ ಇದ್ದು. ಹೊರಗಿನಿಂದ ಬಂದವರಿಗೆ ಮಣೆಹಾಕದೇ ಸ್ಥಳೀಯರಿಗೆ ಟಿಕೇಟು ನೀಡುವಂತೆ ಪಕ್ಷದ ಕಾರ್ಯ ಕರ್ತರ ಒತ್ತಾಯವಿದ್ದ ಹಿನ್ನಲೆಯಲ್ಲಿ ೨೦೨೩ ರ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಯನ ಮೋಟಮ್ಮ ಅವರಿಗೆ ಟಿಕೇಟು ದೊರೆತಿದ್ದು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕಾಂಗ್ರೆಸ್ ಮುಖಂಡ ಜಿ.ಹೆಚ್.ಹಾಲಪ್ಪಗೌಡ ತಿಳಿಸಿದರು.

ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಆಕಾಂಕ್ಷಿಗಳಿದ್ದು. ಅಭ್ಯರ್ಥಿ ನಯನ ಮೋಟಮ್ಮ ಅವರ ಹೆಸರು ಪ್ರಕಟವಾಗುತ್ತಿದ್ದಂತೆ ಕೆಲವರಲ್ಲಿ ಅಸಮಾಧಾನ ಉಂಟಾಗಿದ್ದು ಸಂಘಟನೆಯಿಂದ ದೂರ ಉಳಿದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಆಲ್ದೂರು ಹೋಬಳಿಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಲಿ ಜಿಲ್ಲಾ ಉಪಾಧ್ಯಕ್ಷ ಹಳ್ಳಿ ಕೃಷ್ಣೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಅರೆನೂರು ಪ್ರಕಾಶ್  ನೇತೃತ್ವದಲ್ಲಿ ಅಂಬಳೇ ಹೋಬಳಿಯ ರಾಕೇಶ್, ಹಾಗೂ ವಸ್ತಾರೆ ಹೋಬಳಿಯ ಯೋಗೇಶ್ ಸೇರಿದಂತೆ ನೂರಾರು ಕಾರ್ಯಕರ್ತರ ಮನ ವೋಲೈಸಿ ಪಕ್ಷದ ಗೆಲುವಿಗೆ ಕಾರ್ಯ ನಿರ್ವಹಿಸುತ್ತಿದ್ದು ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವೆ ಮೋಟಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ, ಎಂ.ಎಸ್.ಅನಂತು, ಜಿಲ್ಲಾ ಉಪಾಧ್ಯಕ್ಷ ಹಳ್ಳಿ ಕೃಷ್ಣೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಅರೆನೂರು ಪ್ರಕಾಶ್, ಸಂಪತ್ ,ಕಿಸನ್ ಸೆಲ್ ಜಿಲ್ಲಾಧ್ಯಕ್ಷ ಚಂದ್ರು ಒಡೆಯರ್, ಸಿ.ಬಿ.ಶಂಕರ್ ಸೇರಿದಂತೆ ಎಸ್.ಸಿ. ಎಸ್.ಟಿ ಅಧ್ಯಕ್ಷರು, ಉಪಾಧ್ಯಕ್ಷರು, ಹಿಂದುಳಿದ ವರ್ಗಗಳ ಅಧ್ಯಕ್ಷರು ಉಪಾಧ್ಯಕ್ಷರು ಉಪಸ್ಥಿತರಿದ್ದರು.

Gayathri SG

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

7 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

20 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

46 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

59 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago