ಮೂಡಿಗೆರೆ: ಸಿ.ಪಿ.ಐ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಶ್ರಮ – ರಮೇಶ್ ಉಲ್ಲಾಳ

ಮೂಡಿಗೆರೆ: ನಮ್ಮನ್ನಾಳಿದ ಮೂರು ಪಕ್ಷಗಳು ಆದಿ ದ್ರಾವಿಡ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿಲ್ಲ. ಹಾಗಾಗಿ ನಮ್ಮ ಸಮಾಜದ ವ್ಯಕ್ತಿಗಳೆ ಜನಪ್ರತಿನಿಧಿಗಳಾಗಬೇಕು. ಈ ನಿಟ್ಟಿನಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಸಿಪಿಐ ಪಕ್ಷ ಅಭ್ಯರ್ಥಿ ರಮೇಶ್ ಕೆಳಗೂರು ಅವರು ನಮ್ಮ ಆದಿ ದ್ರಾವಿಡ ಸಮಾಜದವರಾಗಿದ್ದು, ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಆದಿ ದ್ರಾವಿಡ ಸಮಾಜದ ರಾಜ್ಯ ಕಾರ್ಯದರ್ಶಿ ರಮೇಶ್ ಉಲ್ಲಾಳ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆದಿ ದ್ರಾವಿಡ ಸಮಾಜದವರು ಹೆಚ್ಚಾಗಿ ಕೂಲಿ ಕಾರ್ಮಿಕರಾಗಿದ್ದು, ವಾಸಿಸಲು ಮನೆ, ದುಡಿಯಲು ಭೂಮಿ, ಕುಟುಂಬ ನಿರ್ವಹಣೆಗೆ ಕೆಲಸ ನೀಡುವಂತಹ ಮನಸ್ಥಿತಿ ಇಲ್ಲಿವರೆಗೂ ಆಡಳಿತ ನಡೆಸಿದ ಯಾವ ಪಕ್ಷಕ್ಕೂ ಇಲ್ಲ. ಅಲ್ಲದೇ ಸರಕಾರಿ ಸೌಲಭ್ಯಗಳಿಂದ ಕೂಡ ವಂಚಿತರಾಗುತ್ತಿದ್ದಾರೆ. ನಮ್ಮ ಸಮಾಜದ ಜನರು ಗ್ರಾ.ಪಂ, ತಾ.ಪಂ, ಜಿ.ಪಂ, ಎಂಎಲ್‌ಎಯಂತಹ ಸ್ಥಾನ ಪಡೆದರೆ ಮಾತ್ರ ಸಮಾಜದ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಹಾಗಾಗಿ ರಾಜ್ಯದಲ್ಲಿ ಸುಳ್ಯಾ, ಮಡಿಕೇರಿ ಹಾಗೂ ಮೂಡಿಗೆರೆ ವಿಧಾನಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಅಭ್ಯರ್ಥಿ ಸ್ಪರ್ಧಿಸಿದ್ದು, ಅವರಿಗೆ ಸಂಪೂರ್ಣ ಬೆಂಬಲ ಸಮುದಾಯದ ಜನರು ನೀಡಬೇಕೆಂದು ಮನವಿ ಮಾಡಿದರು.

ರಾಜ್ಯ ಉಪಾಧ್ಯಕ್ಷ ಸುರೇಶ್ ಬಲ್ಲಳಬಾಗ್ ಮಾತನಾಡಿ, ಮೂಡಿಗೆರೆ ಕ್ಷೇತ್ರದಲ್ಲಿ ಆದಿ ಡ್ರಾವಿಡ ಸಮಾಜ ಎಲ್ಲಾ ಹೋಬಳಿಯಲ್ಲಿಯೂ ಇದೆ. ಅದರ ಮುಖಾಂತರ ನಮ್ಮ ಸಮಾಜದ ಅಭ್ಯರ್ಥಿ ರಮೇಶ್ ಕೆಳಗೂರು ಅವರನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸಲಾ ಗುವುದು ಎಂದು ಹೇಳಿದರು. ಆದಿ ಡ್ರಾವಿಡ ಸಮಾಜದ ರಾಜ್ಯ ಉಪಾಧ್ಯಕ್ಷ ಎ.ಎಸ್.ಮಾಣಪ್ಪ ಅಡ್ತಾಳ್, ಕಳಸ ತಾಲೂಕು ಅಧ್ಯಕ್ಷ ಮೋಹನ್ ಹಿರೇಬೈಲ್, ಮುಖಂಡರಾದ ಸಂತೋಷ್ ಡಿ.ಸಾಲಿಯಾನ್, ರಾಜು ಗಬ್ಗಲ್, ಅಶೋಕ್ ಗಬ್ಗಲ್ ಮತ್ತಿತರರಿದ್ದರು.

Ashika S

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

3 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

13 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

24 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

43 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

53 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago