ಮೂಡಿಗೆರೆ: ಕೊಲೆ ಪ್ರಕರಣ ಮತ್ತೆ ನಾಲ್ವರು ಹಂತಕರ ಬಂಧನ

ಮೂಡಿಗೆರೆ: ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲ್ಲೂಕು ಮಂಚಿ ಗ್ರಾಮದ ೨೫ ವರ್ಷದ ದಾವೂದ್ ಅಮೀರ್, ೨೩ ವರ್ಷದ ಅಬ್ದುಲ್ ರಹೀಜ್, ಬಂಟ್ವಾಳ ತಾಲ್ಲೂಕು ಕವಾಲ ಮಡೂರು ಗ್ರಾಮದ ೨೩ ವರ್ಷದ ಆಫ್ರಿದಿ, ೨೦ ವರ್ಷದ ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.

ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.

ಜೂನ್ ೮ ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.

ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಗಾಂಜಾ ಮಾರಾಟ ವ್ಯವಹಾರದಲ್ಲಿ ಉಂಟಾದ ಗಲಾಟೆ ಕೊಲೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು.

ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

Gayathri SG

Recent Posts

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…

4 mins ago

ಮಳೆ ಸುರಿದ ಖುಷಿಗೆ ಕಾಡು ಬಸವೇಶ್ವರನಿಗೆ ವಿಶೇಷ ಪೂಜೆ

ನಂಜನಗೂಡು ತಾಲೂಕಿನ  ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ  ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ…

12 mins ago

ಮತದಾನದ ಮರುದಿನ ಆಲಗೂರ್ ನಿರಾಳ: ಸಚಿವ ಪಾಟೀಲರ ಜೊತೆ ಊಟ, ಮನೆಯವರ ಜೊತೆ ಮಾತು

ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…

29 mins ago

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ: ಅಪ್ರಾಪ್ತನ ಬಂಧನ

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು,…

35 mins ago

ಸುಡು ಬಿಸಿಲು: ದಾಹ ನೀಗಿಸಲು ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು

ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ…

57 mins ago

ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ರೈಲ್ವೆ ಇಲಾಖೆ ನಿರ್ಧಾರ

ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡುವ ಪ್ರಯಾಣಿಕರ ಯೋಗಕ್ಷೇಮವನ್ನು ಹೆಚ್ಚಿಸುವ ಅನ್ವೇಷಣೆಯಲ್ಲಿ, ಭಾರತೀಯ ರೈಲ್ವೆ ಇಲಾಖೆ 2023ರ ಆಗಸ್ಟ್ ತಿಂಗಳಲ್ಲಿ ಪ್ರಧಾನ…

59 mins ago