ಮೂಡಿಗೆರೆ: ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಮೂಡಿಗೆರೆ: ಓರ್ವ ಮುಖ್ಯಮಂತ್ರಿಯನ್ನ ಚಪ್ರಾಸಿ ತರ ನಡೆಸಿಕೊಂಡಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಗ ಅವರು ಯಾರ ಪೂಜೆ ಮಾಡುತ್ತಿದ್ದಾರೆ, ರಾಹುಲ್ ಗಾಂಧಿ ಅವರು ರೈತನ ಮಗನಾ ಎಂದು ಪ್ರಶ್ನಿಸಿದರು. ರೈತ ಮಕ್ಕಳಿಗೆ ಇಡಿ ನೋಟಿಸ್ ಕೊಟ್ಟಿರುವುದನ್ನ ಎಲ್ಲಾದರೂ ನೋಡಿದ್ದೀರಾ ಎಂದ ಅವರು, ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದರೆ ೭೯ ಸ್ಥಾನದಿಂದ, ೨೯ಕ್ಕೆ ಬರುತ್ತೀರಾ ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಇನ್ನೂ ದುಡ್ಡು ಹೊಡೆಯಲು ಬಿಡಬೇಕಿತ್ತಾ, ನನ್ನನ್ನು ಯಾವ ರೀತಿ ನಡೆಸಿಕೊಂಡರು ಎಂಬುದು ಗೊತ್ತಿದೆ ಎಂದರು. ನೀರಾವರಿ ಸಚಿವನಾಗಿ ಏನೇನು ನಡೆಸಿದ್ದೀಯಾ ಗೊತ್ತಿದೆ ಕಣಪ್ಪಾ ನಿನ್ನ ಬಂಡವಾಳ. ನಾನು ಮಧ್ಯ ಪ್ರವೇಶ ಮಾಡಿರಲಿಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು. ನಿಮಗೆ ಎಷ್ಟುಸ್ವತಂತ್ರ ಕೊಟ್ಟಿದ್ದೆ, ಆದರೂ ನೀವು ಯಾವ ರೀತಿ ನಡೆಸಿಕೊಂಡಿರಿ, ಓರ್ವ ಸಿಎಂರನ್ನು ಚಪ್ರಾಸಿ ತರಹ ನೋಡಿದ್ದಿರೀ, ನನ್ನ ಬಗ್ಗೆ ಲಘುವಾಗಿ ಮಾತನಾಡುತ್ತೀರಾ ಎಂದರು.

ನಾವೇನು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇವಾ, ಹುಡುಕಿಕೊಂಡು ಬಂದವರು ನೀವು, ಸಿಎಂ ಸ್ಥಾನ ಕೊಡ್ತೀವಿ ಬನ್ನಿ ಅಂತ, ಬೇಡ ಯಾರನ್ನಾದ್ರು ಮಾಡಿಕೊಳ್ಳಿ ಅಂತ ಹೇಳಿದ್ದೆವು ಅಲ್ವಾ, ಮಲ್ಲಿಕಾರ್ಜುನ ಖರ್ಗೆ ಯನ್ನು ಮಾಡಿಕೊಳ್ಳಿ ಎಂದು ಹೇಳಿಲ್ವಾ, ಅಂದು ನಾವು ಈ ಮಾತು ಹೇಳಿದಾಗ ಗುಲಾಮ್ ನಬೀ ಆಜಾದ್, ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಇದ್ರು ಅಲ್ವಾ ಯಾಕೆ ಜೆಡಿಎಸ್ ತಲೆಗೆ ಕಟ್ಟಿದ್ರಿ, ಆಮೇಲೆ ಯಾವ ರೀತಿ ನಡೆಸಿಕೊಂಡ್ರಿ ಎಂದರು.

ಯಾವುದೇ ಷರತ್ತು ಇಲ್ಲ ಅಂದ್ರಿ, ಇಷ್ಟುಮಂತ್ರಿ ಸ್ಥಾನ ಬೇಕು, ಇದೇ ಇಲಾಖೆಗಳು ಬೇಕೆಂದು ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ರಿ. ನಿಮಗೆ ಯಾವ ನೈತಿಕತೆ ಇದೆ ಜೆಡಿಎಸ್ ಬಗ್ಗೆ ಚರ್ಚೆ ಮಾಡಲು ಎಂದು ಹೇಳಿದ ಕುಮಾರಸ್ವಾಮಿ, ನಮ್ಮ ಕಾರ್ಯಕರ್ತರಿಗೆ ಒಂದು ನಯಾ ಪೈಸಾ ಕಡಿಮೆಯಾಗಬಾರದೆಂದು ನಮ್ಮ ಮೇಲೆ ಒತ್ತಡ ಹಾಕಿದ್ರಲ್ಲಾ, ಸಿದ್ದರಾಮಯ್ಯ ಕಮಿಟ್ ಆಗಿದ್ದ ೪ ಸಾವಿರ ಕೋಟಿ ರುಪಾಯಿ ಸಾಲವನ್ನು ನಮ್ಮ ಸರ್ಕಾರ ತೀರಿಸಬೇಕಾಯಿತು ಎಂದರು.

Ashika S

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

3 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

40 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

43 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

57 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

57 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago