ಚಿಕ್ಕಮಗಳೂರು: ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯ ಕತ್ತು ಸೀಳಿ ಭಿಕರವಾಗಿ ಹತ್ಯೆಗೈದಿರುವ ಘಟನೆ ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಹುಣಸೇಮಕ್ಕಿಯಲ್ಲಿ ನಡೆದಿದೆ . ಲಲಿತಾ(43) ಕೊಲೆಯಾದ ದುರ್ದೈವಿ.
ಕಳೆದ ಅನೇಕ ವರ್ಷಗಳಿಂದ ಈ ಮಹಿಳೆ ಹುಣಸೇಮಕ್ಕಿ ಗ್ರಾಮದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು . ಮಹಿಳೆಯನ್ನು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಮನೆಗೆ ನುಗ್ಗಿ ಕತ್ತು ಸೀಳಿ ಕೊಲೆ ಮಾಡಿದ್ದಾರೆಂದು ತಿಳಿದುಬಂದಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಈ ಸಂಬಂಧ
ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೊಲೆಗೈದ ಆರೋಪಿಗಳಗ ಪತ್ತೆಗೆ ಬಲೆ ಬೀಸಿದ್ದಾರೆ.