ಕಾಂಗ್ರೆಸ್ ಕಾರ್ಯಕರ್ತರ ವಿರೋಧದ ನಡುವೆ ‘ನಮೋ ಭಾರತ್’ ಕಾರ್ಯಕ್ರಮ ಯಶಸ್ವಿ

ಚಿಕ್ಕಮಗಳೂರು: ನಗರದ ವಿಜಯಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯ ‘ನಮೋ ಭಾರತ್’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಗಲಾಟೆ ಮಧ್ಯೆಯೇ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಗಿದೆ.

ಚಕ್ರವರ್ತಿ ಸೂಲಿಬೆಲೆ ಬರುವ ಮಾರ್ಗದಲ್ಲೇ 17 ಯೂತ್ ಕಾಂಗ್ರೆಸ್  ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರೆ, ಇನ್ನೊಂದು ತಂಡ ರಸ್ತೆ ಮಧ್ಯೆ ಅರೆ ಬೆತ್ತಲೆಯಾಗಿಯಾಗಿ ಪ್ರತಿಭಟಿಸಿತು. ಮತ್ತೊಂದು ತಂಡ ಕಾರ್ಯಕ್ರಮದ ವೇದಿಕೆಯ ಹಿಂಭಾಗ ಚಕ್ರವರ್ತಿ ಸೂಲಿಬೆಲೆ ಭಾಷಣದ ಮೇಲೆ ಮಹಡಿ ಮೇಲಿನಿಂದ ಕಪ್ಪು ಬಾವುಟದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಹೇಳನಕಾರಿಯಾಗಿ ಬರೆದು ಜೋತುಬಿಟ್ಟಿದ್ದರು.

ಬಾವುಟವನ್ನು ಜೋತು ಬಿಡುತ್ತಿದ್ದಂತೆ 200ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಮಹಡಿ ಮೇಲೆ ಹತ್ತಲು, ಕಾಂಗ್ರೆಸ್ ಕಾರ್ಯಕರ್ತರಿಗೆ ಧರ್ಮದೇಟು ನೀಡಲು ಯತ್ನಿಸಿದರು. ಆದರೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಮಾಜಿ ಶಾಸಕ ಸಿಟಿ ರವಿ  ಕೂಡ ವೇದಿಕೆ ಮುಂಭಾಗದಿಂದ ಬಂದು ಬಾವುಟ ಪ್ರದರ್ಶಿಸಿದವರ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಬಳಿಕ ಪೊಲೀಸರು ಸರ್ಪಗಾವಲಿನಲ್ಲಿ ಬಾವುಟ ಪ್ರದರ್ಶಿಸಿದ ಮೂವರು ಯುವಕರನ್ನು ಕರೆದೊಯ್ದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago