News Karnataka Kannada
Friday, May 03 2024
ಚಿಕಮಗಳೂರು

ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ರದ್ದು ಪಡಿಸಲು ಒತ್ತಾಯಿಸಿ ಮನವಿ

Petition demanding de-recognition of Jain University in Bengaluru
Photo Credit : News Kannada

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಪದ ಬಳಸಿರುವ ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ರದ್ದು ಪಡಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಪದಾಧಿಕಾರಿಗಳು ವಿಶ್ವವಿದ್ಯಾನಿಲಯದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜೈನ್ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕದ ಸಂಭಾಷಣೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ದಲಿತ ಸಮುದಾಯದ ಬಗ್ಗೆ ಅವಾಚ್ಯವಾಗಿ ಮಾತನಾಡುವ ಮೂಲಕ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದರು.

ದೇಶಕ್ಕೆ ಸಂವಿಧಾನ ನೀಡಿರುವಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತ ಸಮುದಾಯದ ಬಗ್ಗೆ ಉದ್ದೇಶಪೂರ್ವಕವಾಗಿ ಅವಹೇಳನಕಾರಿ ಪದ ಬಳಸಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದ,ಪದಾಧಿಕಾರಿಗಳು ಕೂಡಲೇ ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಬೇಕು. ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕರ್ನಾಟಕದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಲ್.ಎಸ್. ಶ್ರೀಕಾಂತ್, ಪದಾಧಿಕಾರಿಗಳಾದ ವಿ.ಎಸ್.ಚಂದ್ರಶೇಖರ್, ನಂಜುಂಡಪ್ಪ, ಪರಮೇಶ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು