ಚಿಕ್ಕಮಗಳೂರಿನಲ್ಲಿ ಧರೆಗೆ ತಂಪೆರೆದ ವರುಣ!

ಚಿಕ್ಕಮಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿತ್ತು. ಇದೀಗ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣ ಧರೆಗೆ ತಂಪೆರೆದಿದ್ದಾನೆ. ಚಿಕ್ಕಮಗಳೂರು ಜಿಲ್ಲೆ, ಕೊಡಗು ಜಿಲ್ಲೆಯ ಕೆಲವೆಡೆ ಮಳೆ ಸುರಿದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ವರುಣದೇವ ಕೃಪೆತೋರಿದ್ದು ವರ್ಷದ ಮೊದಲ ಮಳೆಗೆ ಮಲೆನಾಡಿನ ಜನರಲ್ಲಿ ಹರ್ಷ ಮೂಡಿಸಿದೆ.ಮಲೆನಾಡು ಭಾಗದಲ್ಲಿ ಅನೇಕ ಕಡೆ ಇಂದು ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ವಾತಾವರಣದಲ್ಲಿ ಬದಲಾವಣೆಯಾಗಿದ್ದು ಮಲೆನಾಡಿನ ಮೂಡಿಗೆರೆ, ಕಳಸ, ಎನ್.ಆರ್.ಪುರ ತಾಲ್ಲೂಕಿನ ಅನೇಕ ಕಡೆ ಅಲ್ಲಲ್ಲಿ ಉತ್ತಮ ಮಳೆಯಾಗಿದೆ.

ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ, ದಾರದಹಳ್ಳಿ ಸುತ್ತಮುತ್ತಲ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.ಕಳಸ ತಾಲ್ಲೂಕಿನ ಮುನ್ನೂರುಪಾಲು, ಬಾಳೆಹೊಳೆ, ಹೊರನಾಡು, ಕಾರಗದ್ದೆ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರು, ಚಿಕ್ಕ ಅಗ್ರಹಾರ, ಬನ್ನೂರು, ಸಂಗಮೇಶ್ವರ ಪೇಟೆ, ಕೊಪ್ಪ ತಾಲ್ಲೂಕಿನ ಜಯಪುರ ಸುತ್ತಮುತ್ತ ಮಳೆಯಾಗಿದೆ.

ಒಂದೇ ಪ್ರದೇಶದ ಬೇರೆ ಬೇರೆ ಕಡೆ ಮಳೆಯಲ್ಲಿ ವ್ಯತ್ಯಾಸವಾಗಿದೆ. ೫ ಸೆಂಟ್ಸ್ ನಿಂದ ೨ ಇಂಚುವರೆಗೆ ಮಳೆ ಬೇರೆ ಬೇರೆ ಪ್ರದೇಶದಲ್ಲಿ ವ್ಯತ್ಯಾಸವಾಗಿ ಬಿದ್ದಿದೆ. ಉತ್ತಮ ಮಳೆಯಾಗಿರುವ ಪ್ರದೇಶದಲ್ಲಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಕೆಲವು ಕಡೆ ಅಲ್ಪ ಮಳೆಯಾಗಿದ್ದು ಕೃಷಿಕರ ಆತಂಕವನ್ನು ಹೆಚ್ಚಿಸಿದೆ. ಮುಂದಿನ ಮೂರ್ನಾಲ್ಕು ದಿನಗಳ ವರೆಗೆ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗಲಿದೆ .

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

16 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

30 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

54 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago