News Karnataka Kannada
Tuesday, May 07 2024
ಚಿಕಮಗಳೂರು

ರಾಣಿಝರಿ ಪಾಯಿಂಟ್: ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ

New Project (49)
Photo Credit : News Kannada

 ಕೊಟ್ಟಿಗೆಹಾರ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ರಾಣಿಝರಿ ಪಾಯಿಂಟ್ ನಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿರುವ ಬಗ್ಗೆ ವರದಿ ಆಗಿದೆ.

ನಾಪತ್ತೆಯಾದ ಯುವಕ ಭರತ್‌ ಎಂದು ತಿಳಿದು ಬಂದಿದೆ. ಭರತ್‌ ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕಂಪೆನಿ ಅವರನ್ನು 3 ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿದೆ. ಇದರಿಂದ ಭರತ್‌ ತನ್ನ‌ ಬೈಕ್‌ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ರಾಣಿಝರಿ ಪಾಯಿಂಟ್ ಬಂದಿದ್ದರು.

ಮಗ ಬರದೆ ಇರುವುದರಿಂದ ಪೋಷಕರು ಹುಡುಕಿಕೊಂಡು ಚಿಕ್ಕಮಗಳೂರಿಗೆ ಬಂದಿದ್ದಾರೆ. ಇತ್ತ ರಾಣಿಝರಿ ಪಾಯಿಂಟ್ ನಲ್ಲಿ ಭರತ್ ತನ್ನ ಬೈಕ್‌ ನಿಲ್ಲಿಸಿದ್ದು,ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ.

ಬಾಳೂರು ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿಗಳು ಭರತ್‌ ನ್‌ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು