ಬೋರ್ ವೆಲ್ ಕೊರೆಯುವ ಲಾರಿಗಳಿಗೆ ನೋಂದಣಿ ಕಡ್ಡಾಯ: ಡಿಸಿ ಮೀನಾ ನಾಗರಾಜ್ ಸಿ.ಎನ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುವ ಲಾರಿಗಳು ಕಡ್ಡಾಯವಾಗಿ ಅಂತರ್ಜಲ ಇಲಾಖೆಯಿಂದ 7 (ಎ) ಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಹಾಗೂ ಏಜೆಂಟರು ಹಾಗೂ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 7(ಎ) ರಂತೆ ನೋಂದಾಯಿಸಿಕೊಂಡಿರುವ ಲಾರಿ ಮಾಲೀಕರು ಕೊಳವೆಬಾವಿಯನ್ನು ಕೊರೆಯತಕ್ಕದ್ದು ನೊಂದಾಯಿಸಿಕೊಳ್ಳದೆ ಇರುವ ಕೊಳವೆಬಾವಿ ಕೊರೆಯುವ ಲಾರಿ ಮಾಲೀಕರು ಒಂದು ವಾರದೊಳಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಒಂದು ವಾರದೊಳಗೆ ನೋಂದಾಯಿಸಿಕೊಳ್ಳದೆ ಇರುವ ಮಾಲೀಕರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದಲ್ಲದೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಅವರು ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಸರ್ಕಾರದಿಂದ ಮಂಜೂರಾಗಿರುವ ಕೊಳವೆಬಾವಿಗಳನ್ನು ಅತಿ ಶೀಘ್ರವಾಗಿ ಕೊರೆದು ಪೂರ್ಣಗೊಳಿಸಬೇಕು ಕೊಳವೆಬಾವಿ ಕೊರೆದು ವಿಫಲವಾದ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚಿ ಯಾವುದೇ ಅವಗಡಗಳು ಸಂಭವಿಸದಂತೆ ಕ್ರಮ ವಹಿಸಬೇಕು ತಪ್ಪಿದಲ್ಲಿ ಸಂಬಂಧಿಸಿದ ನಿವೇಶನ ಮಾಲೀಕರು, ಕೊಳವೆಬಾವಿ ಕೊರಸುವ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಕೊಳವೆ ಬಾವಿಗಳನ್ನು ಸರ್ಕಾರ ನಿಗದಿಪಡಿಸಿರುವ ದರದಂತೆ ಕೊರಿಯಬೇಕು ಒಂದು ವೇಳೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರ ಪಡೆದರೆ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ ಕೊಳವೆ ಬಾವಿ ಕೊರೆಯುವ ತಂತ್ರಗಳ ಮಾಲೀಕರು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಈಗಾಗಲೇ ಜಿಲ್ಲೆಯ ಕಡೂರು, ತರೀಕೆರೆ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಉಳಿದ ತಾಲ್ಲೂಕುಗಳಲ್ಲೂ ಕೂಡ ಕುಡಿಯುವ ನೀರಿಗೆ ಅಭಾವ ಕಂಡು ಬರುತ್ತಿದೆ. ಸರ್ಕಾರದಿಂದ ಮಂಜೂರಾಗಿರುವ ಕೊಳವೆ ಬಾವಿಗಳನ್ನು ಶೀಘ್ರವಾಗಿ ಕೊರೆಯಬೇಕು, 2 ವರ್ಷಗಳಿಂದ ಮಂಜೂರಾಗಿರುವ ಕೊಳವೆ ಬಾವಿಗಳನ್ನು ಇದುವರೆಗೂ ಕೊರೆದಿರುವುದಿಲ್ಲ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕೊಳವೆ ಬಾವಿ ಕೊರೆದಿರುವ ಹಣವನ್ನು ಮಂಜೂರು ಮಾಡುವಂತೆ ತಿಳಿಸಿದ ಅವರು ಸರ್ಕಾರ ನಿಗಧಿತ ಪಡಿಸುವ ದರದಲ್ಲಿಯೇ ಕೊಳವೆ ಬಾವಿ ಕೊರೆಯಬೇಕು. ರೈತರಿಗೆ ತೊಂದರೆ ಕೊಡಬಾರದೆಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ಪಾಲಕ ಅಭಿಯಂತರರಾದ ವಿನಾಯಕ ಉಲ್ಲೂರು, ಜಿಲ್ಲಾ ಅಂತರ್ಜಲ ಕಚೇರಿ ಹಿರಿಯ ಭೂ ವಿಜ್ಞಾನಿ ನಂದಿನಿ ಎನ್ ಆರ್ ಹಾಗೂ ಜಿಲ್ಲೆಯ ಎಲ್ಲಾ ಕೊಳವೆಬಾವಿ ಯಂತ್ರದ ಮಾಲೀಕರು ಹಾಗೂ ಏಜೆಂಟರಗಳು ಉಪಸ್ಥಿತರಿದ್ದರು.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

56 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago