ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ. ಶ್ರೀರಾಮಸೇನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿಗೆ ಚಿಕ್ಕಮಗಳೂರು ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದತ್ತಪೀಠ ಸೇರಿದಂತೆ ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್ಪೋಸ್ಟ್, 49 ಸೆಕ್ಟರ್ ಆಫೀಸರ್ಗಳನ್ನು ನೇಮಕ ಮಾಡಲಾಗಿದೆ.