News Karnataka Kannada
Monday, April 29 2024
ಚಿಕಮಗಳೂರು

ರಾಮ ಮೂರ್ತಿ ಪ್ರತಿಷ್ಠಾಪನೆ: ಭಾರತಿ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಅಪಪ್ರಚಾರ

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಇತ್ತ ಈ ಬಗ್ಗೆ ರಾಜಕೀಯ ಆರೋಪ=ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಇದರ ಮಧ್ಯೆ ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪವಿತ್ರ ಪ್ರಾಣ ಪ್ರತಿಷ್ಠಾಪನ ಮಹೋತ್ಸವವನ್ನು ವಿರೋಧಿಸುತ್ತಾರೆಂದು ಅಪಪ್ರಚಾರ ಮಾಡಲಾಗುತ್ತಿದೆ.
Photo Credit : Wikimedia

ಚಿಕ್ಕಮಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಇತ್ತ ಈ ಬಗ್ಗೆ ರಾಜಕೀಯ ಆರೋಪ=ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಇದರ ಮಧ್ಯೆ ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪವಿತ್ರ ಪ್ರಾಣ ಪ್ರತಿಷ್ಠಾಪನ ಮಹೋತ್ಸವವನ್ನು ವಿರೋಧಿಸುತ್ತಾರೆಂದು ಅಪಪ್ರಚಾರ ಮಾಡಲಾಗುತ್ತಿದೆ.

ಈ ಬಗ್ಗೆ ಶೃಂಗೇರಿ ಪೀಠದ ಆಡಳಿತ ಮಂಡಳಿ ಬಹಿರಂಗ ಪತ್ರದ ಮೂಲಕ ಸ್ಪಷ್ಟನೆ ನೀಡಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡದಂತೆ ಶ್ರೀಗಳು ಕರೆ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿರೋಧಿಸುವಂತೆ ಶ್ರೀಗಳು ಕರೆ ನೀಡಿದ್ದಾರೆಂದು ಶೃಂಗೇರಿ ಶ್ರೀ ಭಾರತಿ ತೀರ್ಥ ಸ್ವಾಮೀಜಿಗಳ ಹೆಸರಲ್ಲಿ WWW.jainikajagaran.com ಎಂಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪ್ರಚಾರ ಮಾಡಲಾಗಿದೆ. ಇದನ್ನೇ ನಿಜವೆಂದು ತಿಳಿದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಶ್ರೀಗಳ ಗಮನಕ್ಕೆ ಬಂದಿದೆ. ಇದರಿಂದ ಎಚ್ಚೆತ್ತ ಶೃಂಗೇರಿ ಪೀಠದ ಆಡಳಿತ ಮಂಡಳಿ ಅಧಿಕಾರಿ ಗೌರಿ ಶಂಕರ್ ಬಹಿರಂಗ ಪತ್ರವೊಂದು ಬಿಡುಗಡೆ ಮಾಡಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡದಂತೆ ಶ್ರೀಗಳು ಕರೆ ನೀಡಿದ್ದಾರೆ.

ಶೃಂಗೇರಿ ಮಠದ ಸ್ಪಷ್ಟೀಕರಣ ಹೀಗಿದೆ. .
ಸುಮಾರು 500 ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಸಂತಸವಾಗಿದೆ. ಆದರೆ, ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ www.dainikjagran.com ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಇಂತಹ ಯಾವುದೇ ಸಂದೇಶ ನೀಡಿಲ್ಲ.

ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಅಸ್ತಿಕ ಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.

‘sharadapeetham’ ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ.

ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಸ್ವಾಮೀಜಿ ತಿಳಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು