ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಕಲ್ಯಾಣ, ಎಚ್‌.ಡಿ. ದೇವೆಗೌಡ

ಮೂಡಿಗೆರೆ: ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವೇ ಇಲ್ಲ. ರಾಜ್ಯದಲ್ಲೂ ಕೂಡ ಈ ಎರಡೂ ಪಕ್ಷ ತೊಲಗಿಸಿ ಪ್ರಾದೇಶಿಕ ಪಕ್ಷ ಜೆಡಿಎಸ್‌ನ್ನು ತರಬೇಕೆಂದು ೭೦ ವರ್ಷದಿಂದ ಶತತ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಸಾಧ್ಯವಾಗುತ್ತಿಲ್ಲ. ಈ ಬಾರಿ ಜೆಡಿಎಸ್‌ಗೆ ರಾಜ್ಯಾಧ್ಯಂತ ಅಭೂತಪೂರ್ವವಾಗಿ ಬೆಂಬಲ ವ್ಯಕ್ತವಾಗಿದ್ದು, ರಾಜ್ಯದಲ್ಲೂ ಜೆಡಿಎಸ್ ಅಧಿಕಾರಕ್ಕೆ ಬರಲು ಅವಕಾಶ ನೀಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ,ದೇವೇಗೌಡ ಮನವಿ ಮಾಡಿದರು.

ಅವರುಪಟ್ಟಣದ ಮೂಡಿಗೆರೆ ಕ್ಲಬ್ ಆವರಣದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆಗಾಗಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಜನರಿಗೆ ಕುಡಿಯುವ ನೀರು ಹಾಗೂ ರೈತರ ಜಮೀ ನಿನಲ್ಲಿ ಕೃಷಿ ಚಟುವಟಿಕೆ ನಡೆಸಲು ಕಾವೇ ರಿಯನ್ನು ಉಳಿಸಿಕೊಳ್ಳಲು ಮನ್‌ಮೋಹನ್ ಸಿಂಗ್, ವಾಜಪೇಯಿ, ನರೇಂದ್ರ ಮೋದಿ ಯಾರೂ ಬಿಡಲಿಲ್ಲ. ಇಂದಿಗೂ ಏಕಾಂಗಿ ಯಾಗಿ ಹೋರಾಟ ಮಾಡುತ್ತಿದ್ದೇನೆ. ರಾಜ್ಯದಲ್ಲಿ ರೈತರ ಹಾಗೂ ಜನಸಾಮಾನ್ಯರು ನೆಮ್ಮ ದಿಯಿಂದ ಬದುಕಲು ಎಚ್.ಡಿ.ಕುಮಾರಸ್ವಾಮಿ ಅವರ ಪಂಚರತ್ನ ಯಾತ್ರೆ ಯೋಜನೆ ಜಾರಿಗೊಳಿಸಲು ಜೆಡಿಎಸ್ ಅಧಿಕಾರಕ್ಕೆ ತರಬೇಕು. ಹಿಂದೆ ಮೂಡಿಗೆರೆಗೆ ಭೇಟಿ ಕೊಟ್ಟಾಗ ೩ ಮಂದಿ ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದೀರಿ. ಈಗ ಮೂಡಿಗೆರೆ ಸೇರಿದಂತೆ ೫ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕು. ಎಲ್ಲರಲ್ಲೂ ಕೈ ಮುಗಿದು ಕೇಳುತ್ತೇನೆ. ಮೇ.೧೮ಕ್ಕೆ ನನಗೆ ೯೦ ವರ್ಷ ತುಂಬುತ್ತದೆ. ತನ್ನ ಜೀವಿತ ಅವದಿಯಲ್ಲಿ ಪ್ರಾದೇಶಿಕ ಪಕ್ಷ ಉಳಿಯಬೇಕೆಂದು ನನ್ನ ಆಸೆ. ಈ ಆಸೆಯನ್ನು ಈಡೇರಿಸಿಕೊಡಬೇಕೆಂದ ಅವರು, ಸಭೆಯಲ್ಲಿದ್ದ ಎಸ್.ಎಲ್.ಭೋಜೇಗೌಡನ್ನು ಕರೆದು ರೀ ಭೋಜೇಗೌಡರೇ ನಿಮ್ಮ ಜವಾಬ್ದಾರಿ ಹೆಚ್ಚಿದೆ. ಜಿಲ್ಲೆಯಲ್ಲಿ ೫ ಸ್ಥಾನ ಗೆಲ್ಲಿಸಿ ವಿಧಾನಸಭೆಗೆ ಕಳಿಸಬೇಕೆಂದು ಹೇಳಿದರು.

ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ನನಗೆ ಜೆಡಿಎಸ್‌ನಲ್ಲಿ ಟಿಕೇಟ್ ನೀಡಿ ಅಭ್ಯರ್ಥಿ ಮಾಡಿ ತನ್ನ ಬೆಂಬಲಕ್ಕೆ ಮತಯಾಚಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಂದಿರುವುದು ನನ್ನ ಅದೃಷ್ಟ. ತಾನು ಶಾಸಕನಾಗಿದ್ದಾಗ ಮೂಡಿಗೆರೆ ತಾಲೂಕು ಬರ ಪೀಡಿತ ಪ್ರದೇಶವಲ್ಲ ಎಂದು ಬಿಜೆಪಿ ಘೋಷಣೆ ಮಾಡಿದಾಗ ಅದನ್ನು ವಿರೋಧಿಸಿದೆ. ಕಾಡಾನೆ ಹಿಡಿಯಲು, ಕಸ್ತೂರಿ ರಂಗನ್, ಬಿಪಿಎಲ್ ರದ್ದು ಬಗ್ಗೆ ಸದನದಲ್ಲಿ ಚರ್ಚೆ ಮಾಡಿ ಸಮಸ್ಯೆ ನಿವಾರಿಸಿದ್ದೇ ತಪ್ಪಾ? ಇಂತಹ ಜನಪರವಾದ ಕೆಲಸ ಎಂಎಲ್‌ಸಿ ಹಾಗೂ ಎಂಪಿ ಮಾಡಿದ್ದಾರಾ? ನಾನೀಗ ವಿಷದ ಕೊಂಡಿಯಿಂದ ಹೊರ ಬಂದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮನೆಯಲ್ಲಿ ಧೈರ್ಯವಾಗಿದ್ದೇನೆ. ಬಿಜೆಪಿಯವರಿಗೆ ತಾಕತ್ತಿದ್ದರೆ ಮುಂಬರುವ ತಾ.ಪಂ, ಹಾಗೂ ಜಿ.ಪಂ. ಚುನಾವಣೆ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ ಅವರು, ತನಗೆ ಅಧಿಕಾರ ಸಿಗಲಿ, ಬಿಡಲಿ ಜನಸೇವೆ ನಿರಂತರ ವಾಗಿ ಮಾಡುತ್ತೇನೆ. ಅದಕ್ಕೆ ಸ್ಪೂರ್ತಿಯೇ ಎಚ್.ಡಿ.ದೇವೇಗೌಡರು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಡಿಎಸ್ ಕ್ಷೇತ್ರಸಮಿತಿ ಅಧ್ಯಕ್ಷ ಡಿ.ಜೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್ .ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಎಂ.ಎಸ್.ಬಾಲಕೃಷ್ಣ, ಅರೆಕುಡಿಗೆ ಶಿವಣ್ಣ, ಸುಮಾ ನಾಗೇಶ್, ಬಿ.ಎಲ್.ರಾಮ್‌ದಾಸ್ ಮತ್ತಿತರರಿದ್ದರು.

Umesha HS

Recent Posts

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

2 mins ago

ವಿಶ್ವಕಪ್‌ ಗೆದ್ದರೆ, ತಂಡದ ಪ್ರತಿ ಆಟಗಾರನಿಗೆ 1 ಲಕ್ಷ US ಡಾಲರ್‌ ಘೋಷಣೆ ಮಾಡಿದ ಪಾಕ್‌

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್‌ ಆಟಗಾರರಿಗೆ ಬಂಪರ್‌ ಬಹುಮಾನ ಘೋಷಣೆ ಮಾಡಿದೆ. 

3 mins ago

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

27 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

34 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

40 mins ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

56 mins ago