News Karnataka Kannada
Sunday, April 28 2024
ಚಿಕಮಗಳೂರು

ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ದ ಆಕ್ರೋಶ

ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ಕಾಂಗ್ರೆಸ್ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.ನಗರದ ಖಾಸಗಿ ಆದ್ರಿಕ ಹೋಟೆಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
Photo Credit : NewsKarnataka

ಚಿಕ್ಕಮಗಳೂರು : ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ಕಾಂಗ್ರೆಸ್ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.ನಗರದ ಖಾಸಗಿ ಆದ್ರಿಕ ಹೋಟೆಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಸಂಬಂಧ ಸ್ಥಳಕ್ಕೆ ಜಯಪ್ರಕಾಶ್ ಹೆಗ್ಡೆ, ಕೆಜೆ ಜಾರ್ಜ್ ಆಗಮಿಸುತ್ತಿದ್ದಂತೆ ಪ್ರತಿಭಟನೆಕಾರರ ರೋಶ ಉಕ್ಕಿದೆ.ಬಿಜೆಪಿ ಕಾರ್ಯಕರ್ತರು ಮೋದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಈ ವೇಳೆ 15ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಜಟಾಪಟಿ ವೇಳೆ ಹಿಂದೂ ಕಾರ್ಯ ಗಲಾಟೆ ಮಾಡಲು ಬಂದಿಲ್ಲ ಪ್ರತಿಭಟಿಸುತ್ತಿದ್ದೇವೆ ನಮ್ಮನ್ನು ಏಕೆ ಬಂಧಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿಸಿದ್ದಾರೆ.ಕೆಜೆ ಜಾರ್ಜ್, ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಜಿಲ್ಲೆಯ ಐವರು ಶಾಸಕರ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು