ಚಿಕ್ಕಮಗಳೂರು: ಒಟಿಪಿ ಬರದೇ ವೋಟು ಇಲ್ಲ, ನಕ್ಸಲ್ ಪೀಡಿತ ಗ್ರಾಮಗಳ ವಿನೂತನ ಅಭಿಯಾನ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ಮತದಾರರನ್ನು ಸೆಳೆಯಲು ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಆದರೆ ಮತದಾರರು ಹಿಂದೆಂದಿಗಿಂತಲೂ ಹೆಚ್ಚು ಜಾಗೃತನಾಗಿದ್ದಾರೆ ಕೂಡ. ಚುನಾವಣೆ ವೇಳೆ ಆಮಿಷೆಗಳಿಗೆ ಬಲಿಯಾಗದೆ ತಮ್ಮ ಗ್ರಾಮಗಳಿಗೆ ಆಗಬೇಕಾದ ಕೆಲಸಗಳ ಪಟ್ಟಿಯನ್ನು ಮುಂದಿಡುತ್ತಿದ್ದಾರೆ.

ಕುಡಿಯುವ ನೀರು, ರಸ್ತೆ, ವಿದ್ಯುತ್ ಸಂಪರ್ಕ ಇಲ್ಲದ ಹಲವು ಗ್ರಾಮಗಳು ಈ ಬಾರಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿವೆ. ಸೌಲಭ್ಯಗಳು ನಿರ್ಮಿಸಿಕೊಡದೇ ಮತದಾನ ಮಾಡುವುದಿಲ್ಲ ಎಂದು ಖಡಕ್ ವಾರ್ನಿಂಗ್ ಕೊಡುತ್ತಿವೆ. ಅದೇ ರೀತಿಯಲ್ಲಿ ದಶಕಗಳಿಂದ ಮೊಬೈಲ್ ನೆಟ್ವರ್ಕ್ ಇಲ್ಲದೆ ಡಿಜಿಟಲ್ ಸೇವೆ ಸೌಲಭ್ಯ ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿರುವ ಮೂಡಿಗೆರೆ ತಾಲೂಕಿನ ನಕ್ಸಲ್ ಪೀಡಿತ ಗ್ರಾಮಗಳು ಹೋರಾಟದ ಹಾದಿ ತುಳಿದಿವೆ.

ನಕ್ಸಲ್ ಪೀಡಿತ ಪ್ರದೇಶ ಎನ್ನುವ ಹಣೆಪಟ್ಟಿ ಹೊತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಲಿಗೆ, ಮೆಣಸಿನ ಹ್ಯಾಡದಲ್ಲಿ ಎಲ್ಲರ ಬಳಿ ಮೊಬೈಲ್ ಇವೆ. ಆದರೆ ನೆಟ್ವರ್ಕ್ ಇಲ್ಲ. ಬಿಎಸ್‌ಎನ್‌ಎಲ್, ಏರ್‌ಟೆಲ್ ಸೇರಿದಂತೆ ಯಾವುದೇ ಕಂಪನಿಯ ನೆಟ್ವರ್ಕ್ ಸಿಗುತ್ತಿಲ್ಲ. ಹೀಗಾಗಿ ಯಾವುದೇ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಒಟಿಪಿ ಬಾರದೆ ತೀವ್ರ ತೊಂದರೆ ಎದುರಿಸುತ್ತಿರುವ ಗ್ರಾಮಸ್ಥರು.

ಒಟಿಪಿ ಬರದೇ ವೋಟು ಇಲ್ಲ:
ಮೊಬೈಲ್ ಟವರ್ ಆಗ್ರಹಿಸಿ ಈ ಹಿಂದೆ ಮನವಿ ಸಲ್ಲಿಸಿದರೂ, ಪ್ರತಿಭಟನೆ ನಡೆಸಿದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆ, ಸಾಮಾಜಿಕ ಜಾಲತಾಣ ಬಳಸಿಕೊಂಡು “ಒಟಿಪಿ ಬರದೇ ವೋಟು ಇಲ್ಲ” ಎಂಬ ವಿನೂತನ ಅಭಿಯಾನಕ್ಕೆ ಮುಂದಾಗಿವೆ. ಗ್ರಾಮಗಳಿಗೆ ಟವರ್ ನಿರ್ಮಿಸಬೇಕು. ಟವರ್ ನಿರ್ಮಿಸದೆ, ನಮ್ಮ ಫೋನ್‌ಗಳಿಗೆ ಒಟಿಪಿ ಬರದೇ ವೋಟು ಮಾಡುವುದಿಲ್ಲ.

ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿರುವ ನಕ್ಸಲ್ ಪೀಡಿತ ಗ್ರಾಮಗಳು.
೭೦ ಕುಟುಂಬಗಳಿರುವ ನಕ್ಸಲ್ ಪೀಡಿತ ಗ್ರಾಮಗಳಲ್ಲಿ ನೆಟ್ ವರ್ಕ್ ಇಲ್ಲ. ಈ ಹಿಂದೆ ಅನೇಕ ಬಾರಿ ಭರವಸೆ ನೀಡಿರುವ ಸರ್ಕಾರಗಳು ಈವರೆಗೆ ಮೊಬೈಲ್ ಟವರ್ ನಿರ್ಮಿಸಿಲ್ಲ. ರಸ್ತೆ, ಶಾಲೆ, ಕುಡಿಯುವ ಎಲ್ಲರೀತಿಯಲ್ಲೂ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಈ ಗ್ರಾಮಗಳು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago