ಇದು ಸಿದ್ದಾಂತದ ಸೋಲು ಅಲ್ಲ, ವೈಯಕ್ತಿಕ ಸೋಲು: ಸಿಟಿ ರವಿ ಪ್ರತಿಕ್ರಿಯೆ

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಬಿಜೆಪಿ ಪಕ್ಷದ ಘಟಾನುಘಟಿ ನಾಯಕರಿಗೂ ಈ ಚುನಾವಣೆ ಸೋಲಿನ ರುಚಿ ತೋರಿಸಿದೆ. ಹಾಲಿ ಸಚಿವ ಸಿಟಿ ರವಿ ಕೂಡ ಈ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ.

ನಾಲ್ಕು ಬಾರಿಯ ಶಾಸಕ ಸಿಟಿ ರವಿ ೭೫೦೦ ಮತಗಳ ಅಂತರದಿಂದ ಕಾಂಗ್ರೆಸ್‌ನ ಹೆಚ್‌ಡಿ ತಿಮ್ಮಯ್ಯ ವಿರುದ್ಧ ಸೋಲು ಅನುಭವಿಸಿದ್ದಾರೆ. ಈ ಸೋಲಿನ ಬಳಿಕ ಸಿಟಿ ರವಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು ಸೋಲನ್ನು ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ. “ಈ ಸೋಲನ್ನು ನಾನು ಒಪ್ಪಿಕೊಳ್ಳುತ್ತೇನೆ.

ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಜನತೆಗೆ ತುಂಬು ಹೃದಯದಿಂದ ಧನ್ಯವಾದ ಸಲ್ಲಿಸುತ್ತೇನೆ. ಅವರೆಲ್ಲರೂ ಇಷ್ಟು ವರ್ಷಗಳ ಕಾಲ ನನಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಗೆದ್ದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಅವರೆಲ್ಲರಿಗೂ ಒಳ್ಳೆಯದಾಗಲಿ” ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

ಇನ್ನು ಮತ್ತೊಂದು ಟ್ವೀಟ್ ಮಾಡಿರುವ ಸಿಟಿ ರವಿ ಈ ಸೋಲನ್ನು ಸಿದ್ದಾಂತದ ಸೋಲು ಅಲ್ಲ ಎಂದು ಉಲ್ಲೆಖಿಸಿದ್ದಾರೆ. ಇದು ನಮ್ಮ ವೈಯಕ್ತಿಕವಾದ ಸೋಲು ಎಂದಿರುವ ಸಿಟಿ ರವಿ ಎಲ್ಲಿ ತಪ್ಪಾಗಿದೆ ಎಂದು ಕಂಡುಕೊಂಡು ಮುಂದಿನ ದಿನಗಳಲ್ಲಿ ತಪ್ಪನ್ನು ಸರಿಪಡಿಸಿಕೊಳ್ಳುತ್ತೇವೆ. ನಮ್ಮ ಬೆಂಬಲಕ್ಕೆ ನಿಂತ ಎಲ್ಲಾ ಕನ್ನಡಿಗರಿಗೂ ಧನ್ಯವಾದ ಸಲ್ಲಿಸಿದ್ದಾರೆ. “ಅಸೆಂಬ್ಲಿ ಚುನಾವಣೆಯಲ್ಲಿ ಇಂದಿನ ನಮ್ಮ ಸೋಲು ವೈಯಕ್ತಿಕವಾದದ್ದು.

ಅದು ನಮ್ಮ ಸಿದ್ದಾಂತಕ್ಕೆ ಆದ ಸೋಲು ಅಲ್ಲ. ನಾವು ಎಲಕ್ಲಿ ಎಡವಿದೆವು ಎಂಬುದನ್ನು ನಾವು ಪರಾಮರ್ಶೆ ಮಾಡಿಕೊಳ್ಳಲಿದ್ದು ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಸುವರ್ಣ ಕರ್ನಾಟಕವನ್ನು ಕಟ್ಟುವ ನಮ್ಮ ಪ್ರಯತ್ನ ಮುಂದುವರಿಯುತ್ತದೆ. ನಮಗೆ ಬೆಂಬಲವನ್ನು ನೀಡಿರುವ ಎಲ್ಲಾ ಕನ್ನಡಿಗರಿಗೂ ಧನ್ಯವಾದಗಳು” ಎಂದಿದ್ದಾರೆ ಸಿಟಿ ರವಿ.

ಕರ್ನಾಟಕಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ೧೩೬ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ಸಂಪೂರ್ಣ ಬಹುಮತ ಪಡೆದುಕೊಂಡು ಅಧಿಕಾರಕ್ಕೇರಿದೆ. ಇನ್ನು ಬಿಜೆಪಿ ೬೫ ಕ್ಷೇತ್ರಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದ್ದು ಜೆಡಿಎಸ್ ಸ್ಥಾನ ೧೯ಕ್ಕೆ ಕುಸಿದಿದೆ. ಕಾಂಗ್ರೆಸ್ ಗೆಲುವಿನ ಸಂಭ್ರಮದಲ್ಲಿದ್ದರೆ ಬಿಜೆಪಿ ಸೋಲಿನ ಪರಾಮರ್ಶೆಗೆ ಮುಂದಾಗಿದೆ.

Sneha Gowda

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

49 mins ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

1 hour ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

2 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

2 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

3 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

3 hours ago