News Karnataka Kannada
Tuesday, April 30 2024
ಚಿಕಮಗಳೂರು

ಚಿಕ್ಕಮಗಳೂರು: ಮತಾಂತರ ಮಾಡಲು ಯತ್ನಿಸಿದ ಮೂವರ ಬಂಧನ

ಬಾಲಕನನ್ನು ಬಾತ್‌ರೂಮ್‌ಗೆ ಎಳೆದುಕೊಂಡು ಹೋಗಿ ಟಾಯ್ಲೆಟ್‌ ನೀರು ಕುಡಿಯುವಂತೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಟೆಕ್ಸಾಸ್‌ನ ವುಡ್‌ವೇಯಲ್ಲಿ ಬಂಧಿಸಲಾಗಿದೆ.
Photo Credit : NewsKarnataka

ಚಿಕ್ಕಮಗಳೂರು: ಜನ ಸಂಕಷ್ಟದಲ್ಲಿ ಇದ್ದಾರೆ. ನೀವು ಕಷ್ಟದಲ್ಲಿ ಇದ್ದೀರಾ. ನೀವು ನಮ್ಮ ಧರ್ಮಕ್ಕೆ ಬಂದರೆ ಯೇಸು ನಿಮಗೆಲ್ಲಾ ಒಳ್ಳೆಯದು ಮಾಡುತ್ತಾನೆ. ಎಂದು ಹೇಳಿ ಮತಾಂತರ  ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆಗಳು ತಾಲೂಕಿನ ಎರೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಮ್ಮ ದೇವರು ಏನು ಮಾಡುವುದಿಲ್ಲ. ತೀವ್ರ ಬರಗಾಲ ಬಂದಿದೆ. ಮಳೆ-ಬೆಳೆ ಇಲ್ಲ.  ಮಳೆ-ಬೆಳೆ ಆಗಲಿದೆ. ನಿಮ್ಮ ಕಷ್ಟವನ್ನು ಬಗೆಹರಿಸುತ್ತಾನೆ. ನಿಮ್ಮ ದೇವರು ನಿಮ್ಮ ಕಷ್ಟಕ್ಕೆ ಸಹಾಯ ಮಾಡುತ್ತಿಲ್ಲ. ಮಳೆ ಬರಿಸುತ್ತಿಲ್ಲ. ನಿಮ್ಮ ಮನೆಗೆ ಏಸು ಬರುತ್ತಾನೆ. ನಿಮ್ಮ ಕಷ್ಟಗಳಿಗೆ ಪರಿಹಾರ ಒದಗಿಸುತ್ತಾನೆ ಎಂದಿದ್ದಾರೆ.

ಬಳಿಕ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ ಮಾಡಿದ್ದಾರೆ. ಎರೇಹಳ್ಳಿಯ ಹಲವು ಮನೆಗಳಿಗೆ ಹೋಗಿ ಮತಾಂತರ ಮಾಡಲು ಮುಂದಾಗಿದ್ದರು.

ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಬಂದವರ ವಿರುದ್ದ ಹಿಂದೂಗಳು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮೂವರನ್ನ ಬಂಧಿಸಿದ್ದಾರೆ.

ಮೂವರಲ್ಲಿ ಓರ್ವ ಅಪ್ರಾಪ್ತ ಹಿಂದೂ ಹೇಳಲಾಗಿದೆ. ರಾಜನ್ ಎಂಬಾತ ಇನ್ನಿಬ್ಬರೊಂದಿಗೆ ಇಂದಾವರ, ಉಂಡೇದಾಸರಹಳ್ಳಿ, ಎರೇಹಳ್ಳಿಯ ಮನೆಗಳಿಗೆ ತೆರಳಿ ಮತಾಂತರ ಸೆಳೆಯಲು ಮುಂದಾಗಿದ್ದರು.

ಈ ವೇಳೆ ಎರೇಹಳ್ಳಿ ನಿವಾಸಿ ಪ್ರಸನ್ನ ಕುಮಾರ್‌ ಎಂಬುವವರ ಮನೆಗೂ ಹೋಗಿದ್ದರು. ಮತಾಂತರ ಮಾಡಲು ಬಂದವರ ಮಾತುಗಳನ್ನ ಗಮನಿಸಿದ ಪ್ರಸನ್ನ ಆಕ್ರೋಶಗೊಂಡು ಅವರ ಮಾತುಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲ ಗ್ರಾಮಸ್ಥರು ಒಟ್ಟಾಗಿ ಮತಾಂತರ ಮಾಡುವ ಪ್ರಯತ್ನವನ್ನು ವಿರೋಧಿಸಿದ್ದಾರೆ. ಬಳಿಕ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೂವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು