News Karnataka Kannada
Friday, May 10 2024
ಚಿಕಮಗಳೂರು

ಚಿಕ್ಕಮಗಳೂರಿನಲ್ಲಿ ಕಾಡಾನೆ ಜೊತೆಗೆ ಹುಲಿ ಭೀತಿ

Chamarajanagar: Tiger project completes 50 years successfully
Photo Credit : News Kannada

ಚಿಕ್ಕಮಗಳೂರು:  ಇಷ್ಟು ದಿನಗಳ ಕಾಲ ಕಾಡಾನೆ ಹಾವಳಿಯಿಂದ ಬೇಸತ್ತಿದ್ದ ರೈತರು ಈಗ ಹುಲಿ ದಾಳಿಯಿಂದ ತಮ್ಮ ಮನೆಯಲ್ಲಿ ಪ್ರೀತಿಯಿಂದ ಸಾಕಿದ್ದ ಜಾನುವಾರುಗಳನ್ನು ಕಳೆದುಕೊಳ್ಳುತ್ತಿದ್ದು, ಇದೇ ರೀತಿ ಆದರೆ ಮುಂದಿನ ದಿನಗಳಲ್ಲಿ ತಮ್ಮ ಜೀವನಕ್ಕೆ ಆಸರೆಯಾಗಿರುವ ದನಕರುಗಳನ್ನು ಉಳಿಸಿಕೊಳ್ಳಲಾಗದೆ ಬೀದಿಗೆ ಬೀಳಬೇಕಾದಂತಹ ಸಂದಿಗ್ಧ ಪರಿಸ್ಥಿತಿ ಬಂದೊದಗ ಬಹುದು ಎನ್ನುವ ಭೀತಿಯಲ್ಲಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹುಲಿ ಹಾವಳಿ ಮುಂದುವರೆದಿದ್ದು, ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳಿನಿಂದ ಹುಲಿ ದಾಳಿ ನಿರಂತರವಾಗಿದ್ದು, ಜಾನುವಾರುಗಳನ್ನು ಸಾಕಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಭವಿಷ್ಯದ ಜೀವನದ ಕುರಿತು ಚಿಂತಿಸುವಂತಾಗಿದೆ.

ಹುಲಿ ದಾಳಿಯಿಂದ ೫೦ಕ್ಕೂ ಹೆಚ್ಚು ಜಾನುವಾರು ಬಲಿ :
ಮಲೆನಾಡಲ್ಲಿ ಬೆಳಗ್ಗೆ ಮನೆಯಿಂದ ಗುಡ್ಡಕ್ಕೆ ಮೇಯಲು ಹೋದ ಹಸುಗಳು ವಾಪಸ್ ಮನೆಗೆ ಬರುವವರೆಗೂ ರೈತರು ಆತಂಕದಲ್ಲೇ ಸಮಯ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆ, ಕಾಡುಕೋಣ ದಾಳಿಯಿಂದ ಹೈರಣಾದ ಜನರು ಕಳೆದ ಆರು ತಿಂಗಳಿಂದ ಹುಲಿ ದಾಳಿಯ ಆತಂಕದಲ್ಲಿದ್ದಾರೆ.

ಹುಲಿ ದಾಳಿಯಿಂದ ಈವರೆಗೂ ೫೦ಕ್ಕೂ ಹೆಚ್ಚು ಜಾನುವಾರುಗಳು ಹುಲಿ ದಾಳಿಯಿಂದ ಸಾವನ್ನಪ್ಪಿವೆ. ಹಲವು ಬಾರಿ ಹುಲಿಯನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ವಾಗಿಲ್ಲ. ಹುಲಿ ಸೆರೆಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಕಿದ್ದರೂ ಹುಲಿಯನ್ನು ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ. ಹುಲಿ ದಾಳಿಯಿಂದ ನಿರಂತರವಾಗಿ ರಾಸುಗಳನ್ನ ಕಳೆದುಕೊಳು ತ್ತಿರುವ ರೈತರು ಕೂಡಲೇ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕಳೆದೆರೆಡು ದಿನಗಳ ಹಿಂದೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ. ಮತ್ತಿಕಟ್ಟೆಯ ಬ್ಲೂ ಮೌಂಟ್ ಎಸ್ಟೇಟ್ ಆನಂದ್ ಮಿಸ್ಕಿತ್ ಅವರ ಕಾಫಿ ತೋಟದಲ್ಲಿ ಮಧುಸೂದನ್ ಎನ್ನುವವರ ಹಸು ಹುಲಿ ಬಾಯಿಗೆ ತುತ್ತಾಗಿದೆ. ಬಣಕಲ್ ಸುತ್ತಮುತ್ತಲಿನ ಹೆಗ್ಗುಡ್ಲು, ಮತ್ತಿಕಟ್ಟೆ, ಬಿ.ಹೊಸಳ್ಳಿ, ಹೊಕ್ಕಳ್ಳಿ, ಭಾರತೀಬೈಲ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಹುಲಿ ದಾಳಿ ನಿರಂತರವಾಗಿವೆ. ಆದರೆ ಅರಣ್ಯ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಅಲ್ಲದೆ ಹುಲಿ ದಾಳಿಯಿಂದ ಜಾನುವಾರುಗಳು ಸಾವನ್ನಪ್ಪುತ್ತಿರುವುದು ಒಂದೆಡೆಯಾದರೆ, ಕೂಲಿ ಕಾರ್ಮಿಕರು ತೋಟದ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದು. ತೋಟದ ಕೆಲಸಗಳು ಕುಂಟಿತಗೊಡಿವೆ ಈ ಕುರಿತು ಹಲವಾರು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಿಘ್ರವೇ ಅರಣ್ಯ ಇಲಾಖೆಯಿಂದ ಹುಲಿಯನ್ನು ಸೆರೆಹಿಡಿಯುವ ಕೆಲಸವಾಗಬೇಕಕೆಂದು ಕಾಫಿ ಬೆಳೆಗಾರರು ಒತ್ತಾಯಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಪ್ರಾಣ -ಮಾನವ ಸಂಘರ್ಷ ಹಲವು ವರ್ಷಗಳಿಂದಲೂ ನಿರಂತರವಾಗಿ ನಡೆಯುತ್ತಲೇ ಇದ್ದು ಆಗಿಂದ್ದಾಗೆ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆಯಾದರೂ ಸಮಸ್ಯೆಗಳನ್ನು ಎದುರಿಸುತ್ತಿರುವುದು ಮಾತ್ರ ಜನಸಾಮಾನ್ಯರುಗಳಾಗಿದ್ದು. ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಈ ಮಾನವ ಪ್ರಾಣ ಸಂಘರ್ಷಕ್ಕೆ ಆದಷ್ಟು ಬೇಗ ಅಂತ್ಯವಾಗಲಿ ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು