ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಚಿಕ್ಕಮಗಳೂರು: ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಭಾನುವಾರವೂ ಒಬ್ಬ ವ್ಯಕ್ತಿಯನ್ನು ಬಲಿ ಪಡೆದಿದ್ದು, ಆನೆಯ ಹುಡುಕಾಟಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಕಂಚಿನಕಲ್ ದುರ್ಗದ ಕೂಲಿ ಕಾರ್ಮಿಕ ಕಿನ್ನಿ, ಡಿಸೆಂಬರ್ ತಿಂಗಳ ಆರಂಭದಲ್ಲಿ ಹೆಡದಾಳು ಗ್ರಾಮದಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಗಾಳಿ ಗಂಡಿ ಯುವತಿ ಮೀನಾ ಕಾಡಾನೆಯಿಂದ ಮೃತಪಟ್ಟಿದ್ದರು. ಈಗ ಅದೇ ಭಾಗದಲ್ಲಿ ಭಾನುವಾರವೂ ಆನೆ ದಾಳಿಗೆ ಆನಂದ ಪೂಜಾರಿ ಬಲಿಯಾಗಿದ್ದಾರೆ.

ಪುಂಡಾನೆ ಸೇರಿ ಐದು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ಸರ್ಕಾರದಿಂದ ಅನುಮತಿ ಪಡೆದಿತ್ತು. ಹಲವು ದಿನಗಳ ಕಾಲ ಕಾರ್ಯಾಚರಣೆ ನಡೆಸಿದರೂ ಪುಂಡಾನೆ ಪತ್ತೆಯಾಗಿರಲಿಲ್ಲ. ಬೇರೊಂದು ಆನೆಯನ್ನು ಹಿಡಿದು ಸ್ಥಳಾಂತರ ಮಾಡಲಾಗಿತ್ತು. ಕಾರ್ಯಾಚರಣೆ ವೇಳೆ ಮತ್ತೊಂದು ಕಾಡಾನೆ ಕೂಡ ಮೃತಪಟ್ಟಿತ್ತು.

ಹಲವು ರೀತಿಯ ಕಸರತ್ತನ್ನು ಅರಣ್ಯ ಇಲಾಖೆ ಆಗ ಮಾಡಿತ್ತು. ತಿಂಗಳು ಗಟ್ಟಲೆ ಹುಡುಕಾಡಿದರೂ ಆನೆ ಪತ್ತೆಯಾಗದಿದ್ದಾಗ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು. ಈಗ ಮತ್ತೊಮ್ಮೆ ಕಾರ್ಯಾಚರಣೆ ಆರಂಭಿಸಲು ತಯಾರಿ ನಡೆಸುತ್ತಿದ್ದಾರೆ. ಈ ಹಿಂದೆ ಇಬ್ಬರ ಮೇಲೆ ದಾಳಿ ನಡೆಸಿದ್ದ ಆನೆಯೇ ಆನಂದ ಪೂಜಾರಿ ಅವರ ಮೇಲೆ ದಾಳಿ ನಡೆಸಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ.

ಭಾನುವಾರ ದಾಳಿ ನಡೆಸಿದ ಆನೆಯನ್ನು ಸ್ಥಳೀಯರೊಬ್ಬರು ನೋಡಿದ್ದು, ಅವರು ಹೇಳುವ ಮಾಹಿತಿ ಪ್ರಕಾರ ಬೇರೆ ಆನೆ ಇರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಈ ಭಾಗದಲ್ಲಿ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಇನ್ನಷ್ಟು ಕಡೆ ಕ್ಯಾಮರಾ ಅಳವಡಿಸಲಾಗುವುದು. ಪುಂಡಾನೆಯನ್ನು ಗುರುತಿಸಿದ ಬಳಿಕ ಕಾರ್ಯಾಚರಣೆ ಆರಂಭಿಸುವ ಬಗ್ಗೆ ಅರಣ್ಯ ಇಲಾಖೆ ಆಲೋಚನೆ ನಡೆಸಲಿದೆ ಎಂದು ಹೇಳುತ್ತಾರೆ.

ಬೀಟಮ್ಮ ಮತ್ತು ಭುವನೇಶ್ವರಿ ತಂಡದ ಆನೆಗಳು ಸದ್ಯಕ್ಕೆ ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಇಲ್ಲ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿವೆ. ಆದ್ದರಿಂದ ಈಗ ಕಂಚಿನಕಲ್ ದುರ್ಗ ಸುತ್ತಮುತ್ತ ಪುಂಡಾಟ ನಡೆಸಿರುವ ಆನೆಗಳೇ ಬೇರೆ. ಆದ್ದರಿಂದ ಈ ಆನೆಗಳ ಚಲನ ವಲನಗಳ ಮೇಲೆ ನಿಗಾ ಇಡಲಾಗಿದೆ ಎಂದು ಅವರು ವಿವರಿಸಿದರು.

ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭಿಸುವ ಕುರಿತು ಚರ್ಚಿಸಲಾಗುತ್ತಿದೆ. ಆನೆ ಯಾವುದು ಎಂಬುದನ್ನು ಗುರುತಿಸುವ ಕೆಲಸ ಆರಂಭವಾಗಿದೆ. ರಮೇಶ್‌ಬಾಬು ಉಪಅರಣ್ಯ ಸಂರಕ್ಷಣಾಧಿಕಾರಿ ಕಂಚಿನಕಲ್ ದುರ್ಗ ಸುತ್ತಮತ್ತಲ ಭಾಗ ಕಡಿದಾದ ಗುಡ್ಡಗಾಡು ಪ್ರದೇಶವಾಗಿದ್ದು ಅಲ್ಲಿ ಆನೆಗಳ ಸೆರೆ ಕಾರ್ಯಾಚರಣೆ ನಡೆಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ.

ಸಮತಟ್ಟಾದ ಪ್ರದೇಶವಾದರೆ ಸೆರೆ ಕಾರ್ಯಾಚರಣೆ ಸುಲಭವಾಗಲಿದೆ. ಕಡಿದಾದ ಪ್ರದೇಶಕ್ಕೆ ಸಾಕಾನೆಗಳ ಸಹಿತ ತೆರಳಿ ಕಾರ್ಯಾಚರಣೆ ಕಷ್ಟ. ಆದ್ದರಿಂದ ಪುಂಡಾನೆ ಕಾಣಿಸಿಕೊಂಡರೂ ಅದು ಸುರಕ್ಷಿತ ಸ್ಥಳಕ್ಕೆ ಬರುವ ತನಕ ಕಾಯಬೇಕಾಗುತ್ತದೆ. ಅಲ್ಲಿಯ ತನಕ ಅದನ್ನು ಹಿಂಬಾಲಿಸ ಬೇಕಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

Chaitra Kulal

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago