ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಮತಯಾಚಿಸಲು ಬೋಜೇಗೌಡ ಕರೆ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ರಾಜ್ಯ ನಾಯಕರುಗಳು ಹೊಂದಾಣಿಕೆ ಮೇರೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕ್ಷೇತ್ರದ ಕಾರ್ಯಕರ್ತರು ಮತಯಾಚಿಸಿ ಗೆಲುವಿಗೆ ಕಾರ್ಯೋನ್ಮುಖರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಕರೆ ನೀಡಿದರು.

ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಪರ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ಮುಖಂಡರೊಂದಿಗೆ ಒಗ್ಗಟ್ಟಿನಿಂದ ಭಾಗಿಯಾಗಿ ಗೆಲುವಿಗೆ ಶ್ರಮಿಸಬೇಕಿದೆ ಎಂದು ತಿಳಿಸಿದರು.

ಚಿಕ್ಕಮಗಳೂರು, ತರೀಕೆರೆ, ಮೂಡಿಗೆರೆ ಹಾಗೂ ಶೃಂಗೇರಿ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹೋಬಳಿ ಮಟ್ಟದಲ್ಲಿ ಬೆಂಬಲಿತ ಅಭ್ಯರ್ಥಿ ಪೂಜಾರಿ ಪರವಾಗಿ ಸ್ಥಳೀಯವಾಗಿ ಭಿನ್ನಾಭಿಪ್ರಾಯವನ್ನು ಬದಿಗಿರಿಸಿ ಎನ್‌ಡಿಎ ಮೈತ್ರಿಕೂಟದ ಒಪ್ಪಂದ ಮೇರೆಗೆ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಬೆಲೆಕೊಟ್ಟು ಒಮ್ಮತದಿಂದ ಗೆಲುವಿಗೆ ಸಹಕರಿಸಬೇಕು ಎಂದರು.

ರಾಜ್ಯದಲ್ಲಿ ೨೮ ಲೋಕಸಭಾ ಕ್ಷೇತ್ರದಲ್ಲಿ ೨೫ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದು ಅಲ್ಲಿನ ಜಿಲ್ಲಾವಾರು ಜೆಡಿಎಸ್ ಮುಖಂಡರುಗಳು ಒಮ್ಮತದಿಂದ ಬೆಂಬಲಿತ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಲಿದ್ದಾರೆ. ಅದೇ ರೀತಿ ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಮೂರು ಅಭ್ಯರ್ಥಿಗಳು ಜೆಡಿಎಸ್‌ನಿಂದ ಸ್ಪರ್ಧಿಸಿದ್ದು ಅಲ್ಲಿನ ಜಿಲ್ಲಾವಾರು ಬಿಜೆಪಿ ಮುಖಂಡರುಗಳು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ಕುಮಾರ್ ಮಾತನಾಡಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ರಾಜ್ಯನಾಯಕರುಗಳ ಆದೇಶದಂತೆ ಜಿಲ್ಲೆಯ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ ಬೆಂಬಲಿಸಲಿದ್ದು ಕಡೂರು ಕ್ಷೇತ್ರವು ಹಾಸನಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಕಡೂರಿನ ಬಿಜೆಪಿ ಮುಖಂಡರುಗಳು ಜೆಡಿಎಸ್ ಪರ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ, ಗೋಪಿ, ಮಾಜಿ ಸದಸ್ಯ ದಿನೇಶ್, ಎಸ್ಸಿಎಸ್ಟಿ ಘಟಕದ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ನಗರ ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ತಾ.ಪಂ. ಮಾಜಿ ಸದಸ್ಯ ಆನಂ ದ್‌ನಾಯ್ಕ್, ಮುಖಂಡರುಗಳಾದ ಆನಂದೇಗೌಡ, ಚಿದಾನಂದ್, ಗುಪ್ತ, ಹೆಚ್.ಎಸ್.ಮಂಜಪ್ಪ, ರತ್ನ ಮತ್ತಿ ತರರು ಉಪಸ್ಥಿತರಿದ್ದರು.

Maithri S

Recent Posts

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

15 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

43 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 hour ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

1 hour ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

2 hours ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

2 hours ago