ಮೂಡಿಗೆರೆಯಲ್ಲಿ ನದಿಗೆ ಬಿದ್ದು ತೇಲಿಹೋದ ಮಹಿಳೆ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಭೀಕರ ಮಳೆಯಿಂದ ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ರಣಭೀಕರ ಮಳೆ ನಡುವೆಯೇ ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ವೃದ್ದೆಯೊಬ್ಬರು ನದಿಗೆ ಬಿದ್ದಿದ್ದಾರೆ ಎನ್ನುವ ಎಂಬ ಶಂಕೆ ವ್ಯಕ್ತವಾಗಿದ್ದು,ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಹೇಮಾವತಿ ನದಿಯಲ್ಲಿ ತೇಲುತ್ತಿದ್ದ ವೃದ್ಧೆಯ ಶವ ಪತ್ತೆಯಾಗಿದೆ. ಈ ವೇಳೆ ನದಿ ದಡದಲ್ಲಿ ಸಿಲುಕಿದ್ದ ಶವವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ.

ಮೂಡಿಗೆರೆ ತಾಲೂಕಿನ ಮೃತರನ್ನು ದಾರದಹಳ್ಳಿ ಗ್ರಾಮದ ದೇವಮ್ಮ(61 ) ಎಂದು ಗುರುತಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಧಾವಿಸಿ,ಪರಿಶೀಲನೆ ನಡೆಸಿದರು.ಆದರೆ ಇದು ಆತ್ಮಹತ್ಯೆಯೋ ಆಕಸ್ಮಿಕವೋ ಎನ್ನುವ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

Sneha Gowda

Recent Posts

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

12 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

3 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago