ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ಯುವಕ ವರುಣ್ ಎಂದು ಗುರುತಿಸಲಾಗಿದೆ.
ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ.
ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ, ವರುಣ್ಗೆ ಡ್ರ್ಯಾಗರ್ ಹಾಕಿದ್ದಾನೆ. ವರುಣ್ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಶಿವಮೊಗ್ಗಕ್ಕೆ ಕೊಂಡೊಯ್ದರು ವರುಣ್ ಸಾವನ್ನಪ್ಪಿದ್ದಾನೆ. ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತವಾಗಿದೆ. ಸ್ಥಳಕ್ಕೆ ಎಸ್.ಪಿ.ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್…
ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ ನಡೆದಿದೆ.
ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರುಗಳು ಹಿರೇಮಠದ ದಂಪತಿಗೆ ಸಾಂತ್ವನ ಹೇಳಿದರು.
ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ಸೂಪರ್ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ…
ಚಲಿಸುತ್ತಿದ್ದ ಸಾರಿಗೆ ಬಸ್ನ ಚಕ್ರ ಕಳಚಿಕೊಂಡು ಬಸ್ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ…