News Karnataka Kannada
Saturday, April 20 2024
Cricket
ಶಿವಮೊಗ್ಗ

ಇಂದು ಸಂಜೆ ಅಮಿತ್ ಶಾ ಭೇಟಿಯಾಗಲಿರುವ ಬಿ.ಎಸ್ ಯಡಿಯೂರಪ್ಪ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ.
Photo Credit :

ಶಿಕಾರಿಪುರ: ಇಂದು ಸಂಜೆ ನಾನು ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಹೇಳಿಕೆ ನೀಡಿದ್ದಾರೆ.

ರಾಜ್ಯದ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳಲು ಅಮಿತ್ ಶಾ ಬರುತಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯದ ಬಗ್ಗೆ ಹೆಚ್ಚು ಗಮನ ಕೊಡಲಿದ್ದಾರೆ.ನಾವು 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಈ ಗುರಿ ತಲುಪಲು ಬೇಕಾದ ಸಲಹೆಯನ್ನು ಅಮಿತ್ ಶಾ ನೀಡಲಿದ್ದಾರೆ ಎಂದರು.

ನನ್ನ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದ ಯಡಿಯೂರಪ್ಪ ಅವರು ಬಿ.ಎಲ್.ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತಿದ್ದಾರೆ.ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಬಿಡುವುದು ಕೇಂದ್ರ ನಾಯಕರಿಗೆ ಬಿಟ್ಟಿದ್ದು.ಈ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು.

ಪಕ್ಷ‌ಸಂಘಟಿಸುವ ಉದ್ದೇಶದಿಂದ ರಾಜ್ಯ ಪ್ರವಾಸ ಮಾಡುತಿದ್ದೇವೆ. ಬರುವ ದಿನಗಳಲ್ಲಿ‌ ನಾನು ಹಾಗೂ ನಮ್ಮ ಮುಖಂಡರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಪ್ರತಿ ಬೂತ್ ಬಲಪಡಿಸಲಿದ್ದೇವೆ. ಬೂತ್ ಮಟ್ಟದಲ್ಲಿ ಗೆದ್ದರೆ ಇಡಿ ರಾಜ್ಯವನ್ನೇ ಗೆದ್ದಂತೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು