News Karnataka Kannada
Saturday, April 20 2024
Cricket
ಶಿವಮೊಗ್ಗ

ಮಧ್ಯಾಹ್ನ 1ಗಂಟೆಗೆ ದಿಢೀರ್ ಸುದ್ದಿಗೋಷ್ಠಿ ಸಚಿವ ಈಶ್ವರಪ್ಪ

Ishwarppa
Photo Credit :

ಶಿವಮೊಗ್ಗ:  ಇಂದು ಮಧ್ಯಾಹ್ನ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಕೇಳಿ ಬಂದ ಬೆನ್ನಲ್ಲೇ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.

ಸಂತೋಷ್ ಆತ್ಮಹತ್ಯೆ ಬೆನ್ನಲ್ಲೇ ಸಚಿವ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ನೀಡುತ್ತಾರ ಅಥವಾ ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ ಹೇಳುತ್ತಾರ ಎನ್ನುವುದು ನೋಡಬೇಕಿದೆ.

ಗುತ್ತಿಗೆದಾರ ಸಂತೋಷ್ ಸಚಿವ ಈಶ್ವರಪ್ಪ ಅವರ ಮೇಲೆ 40% ಕಮಿಷನ್ ಆರೋಪ ಹಾಕಿ ಉಡುಪಿಯ ಖಾಸಗಿ ಹೊಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು,ಇದಾದ ಬಳಿಕ ಸಚಿವರ ರಾಜೀನಾಮೆಗೆ, ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ.

ಇನ್ನೊಂದೆಡೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬೆಂಬಲಿಸಿ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸಚಿವರ ವಿರುದ್ಧದ ಕಾಂಗ್ರೆಸ್ ಷಡ್ಯಂತ್ರ ವಿರೋಧಿಸಿ, ರಾಷ್ಟ್ರಭಕ್ತರ ಬಳಗದ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು