ಅಂಚೆ ಪ್ರಗತಿಗೆ ಸಿಬ್ಬಂದಿಗಳ ಅಹರ್ನಿಶಿ ಶ್ರಮ ಅಗತ್ಯ: ಡಾ.ಬಾಲಕೃಷ್ಣ ಹೆಗಡೆ

ಶಿವಮೊಗ್ಗ: ದೇಶದಲ್ಲಿಯೇ ಅತ್ಯಂತ ವಿಶ್ವಾಸಾರ್ಹ, ಪ್ರಮಾಣಿಕ ಸೇವೆಯ ಇಲಾಖೆ ಭಾರತೀಯ ಅಂಚೆ ಇಲಾಖೆಯಾಗಿದ್ದು ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ಇಲಾಖೆಯ ಹಾಗೂ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ.ಬಾಲಕೃಷ್ಣ ಹೆಗಡೆ ಕರೆ ನೀಡಿದರು.

ಅವರು ಇಂದು ಇಲ್ಲಿಯ ಪ್ರಧಾನ ಅಂಚೆ ಕಚೇರಿಯಲ್ಲಿ ಶಿವಮೊಗ್ಗ ನಗರದ ವಿವಿಧ ಅಂಚೆ ಕಚೇರಿಗಳ ಸಿಬ್ಬಂದಿಗಳಿಗ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು. ಭಾರತೀಯ ಅಂಚೆಗೆ ಸುಧೀರ್ಘ ಇತಿಹಾಸವಿದೆ. ಅನೇಕ
ಏರಿಳಿತಗಳನ್ನೂ ಅದು ಕಂಡಿದೆ. ಆದರೆ ಸ್ವಾತಂತ್ರ್ಯ ನಂತರದ ವರ್ಷಗಳಲ್ಲಿ ಕೇಂದ್ರ ಸರ್ಕಾರಗಳು ಇಲಾಖೆಯ ಪುನಶ್ಚೇತನಕ್ಕೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಗ್ರಾಮದ ಕಟ್ಟಕಡೆಯ ವ್ಯಕ್ತಿಗೂ ಅಂಚೆ ಸೇವೆ ದೊರಕುವಂತೆ ಮಾಡಿರುವುದು ಶ್ಲಾಘನೀಯ ಸಂಗತಿ ಎಂದು
ಅವರು ಹೇಳಿದರು.

ಇಲಾಖೆಯ ಸಿಬ್ಬಂದಿಗಳು ತಾವು ಗ್ರಾಹಕ ಸ್ನೇಹಿಯಾಗಿರಬೇಕು ಎಂದು ತಿಳಿದಾಗ ಮಾತ್ರ ಅದು ಆರ್ಥಿಕವಾಗಿ ಪ್ರವರ್ಧಮಾನಕ್ಕೆ ತಲುಪುವುದು ಸಾಧ್ಯವಾಗುತ್ತದೆ. ಅಲ್ಲದೆ ಬದಲಾಗುತ್ತಿರುವ ತಂತ್ರಜ್ಞಾನಕ್ಕೂ ಸಿಬ್ಬಂದಿಗಳು ಒಗ್ಗಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಸಿಬ್ಬಂದಿಗಳು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು. ಒಂದು ವೇಳೆ ಯಾವುದಾದರೂ ಸೇವೆ ತಮ್ಮ ಶಾಖೆಯಲ್ಲಿ ಇಲ್ಲದಿದ್ದರೆ ಬೇರೆ ಯಾವ ಶಾಖೆಯಲ್ಲಿ ಅದು ಲಭ್ಯವಿದೆ ಎಂಬ ಮಾಹಿತಿ ನೀಡಬೇಕು. ಎಲ್ಲ ಮಾನಸಿಕ ಒತ್ತಡ, ತುಮುಲಗಳನ್ನು ಬದಿಗಿಟ್ಟು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಅವರು ತಿಳಿಸಿದರು. ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಇಲಾಖೆಯ ವಿಭಾಗೀಯ
ಅಧೀಕ್ಷಕರಾದ ಹರೀಶ ಮಾತನಾಡಿ, ಕೊವಿಡ-೧೯ ಸಂದರ್ಭದಲ್ಲಿ ಇಲಾಖೆಯು ಆರ್ಥಿಕವಾಗಿ ಹಿನ್ನಡೆಯನ್ನು ಅನುಭವಿಸಿದೆ. ಆದರೆ ಈಗ ಪರಿಸ್ಥಿತಿ ತಿಳಿಯಾಗಿದೆ. ಸಿಬ್ಬಂದಿಗಳು ಅಂಚೆ ಜೀವ ವಿಮೆ ಪಾಲಿಸಿ, ಪಿಪಿಎಫ್ ಮೊದಲಾದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ನೀಡಿ ಇಲಾಖೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ಉಪ ಅಧೀಕ್ಷಕರಾದ ನಾಗರಾಜ, ಶ್ರೀಮತಿ ಉಷಾ ಮೊದಲಾದವರು ಉಪಸ್ಥಿತರಿದ್ದರು. ಮಾರುಕಟ್ಟೆ ವಿಭಾಗದ ರಾಘವೇಂದ್ರ ಹವಳರ್, ಪಿಆರ್‌ಒ ರಾಘವೇಂದ್ರ ಜಿ. ಕಾರ್ಯಕ್ರಮ ನಿರ್ವಹಿಸಿದರು.

Swathi MG

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

5 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

6 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

10 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

20 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

26 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

41 mins ago