News Karnataka Kannada
Saturday, May 04 2024
ಶಿವಮೊಗ್ಗ

ಅಡುಗೆ ಅನಿಲ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ- ಸೌದೆ ಒಲೆ ಹಚ್ಚಿ ಪ್ರತಿಭಟನೆ

New Project (21)
Photo Credit :
ಶಿವಮೊಗ್ಗ : ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ  ಮಹಾವೀರ ವೃತ್ತ ದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆ ಹಚ್ಚಿ ಪ್ರತಿಭಟಿಸಲಾಯಿತು.
ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ  ಅಡುಗೆ ಅನಿಲದ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ಮತ್ತೆ  ತಿಂಗಳಲ್ಲೇ ಒಂದೇ ಎರಡು ಬಾರಿ ಅಡುಗೆ ಅನಿಲದ ದರವನ್ನು ಏರಿಕೆ ಮಾಡುತ್ತಾ ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ದೇಶದ ಶ್ರೀಸಾಮಾನ್ಯನ ಮೇಲೆ ಬರೆಯುತ್ತಿರುವುದು ತೀವ್ರ ಖಂಡನೀಯ.
ಈಗಾಗಲೇ ಹಲವಾರು ರೈತ-ಕಾರ್ಮಿಕ ಜನವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ  ದೇಶದ ಅದು ಮೂರು ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ಸಂದೇಶಗಳನ್ನು ನೀಡಿದ್ದು ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು