ಅಪರಾಧ ಪ್ರಕರಣಗಳಲ್ಲಿ ಶೇ.10 ರಷ್ಟು ಕಡಿಮೆ ಮಾಡಲು ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾಗುವುದು:ಲಕ್ಷ್ಮೀ ಪ್ರಸಾದ್

ಶಿವಮೊಗ್ಗ : ಜಿಲ್ಲೆಯಲ್ಲಿ ಒಟ್ಟಾರೆ ಅಪರಾಧ ಪ್ರಕರಣಗಳಲ್ಲಿ ಶೇ.10 ರಷ್ಟು ಕಡಿಮೆ ಮಾಡಲು ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದರು.

ಗುರುವಾರ ನಗರದಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಗಾಂಜಾ, ಮಟ್ಕಾ ಹಾಗೂ ಅಬಕಾರಿ ಪ್ರಕರಣಗಳನ್ನು ಕಡಿಮೆ ಮಾಡಲು ಯತ್ನಿಸಲಾಗುತ್ತಿದೆ. ಇವು ಕಡಿಮೆಯಾದರೆ ಪ್ರತಿಶತ ಅಪರಾಧಗಳು ಕಡಿಮೆಯಾಗಲಿವೆ ಎಂದರು.

ಐಪಿಸಿ ಅಪರಾಧ ಪ್ರಕರಣಗಳು ಶೇ.8 ರಷ್ಟು ಕಡಿಮೆಯಾದರೆ, ಸಿಆರ್‌ಪಿಸಿ ಪ್ರಕರಣಗಳು ಶೇ.25 ರಷ್ಟು ಹೆಚ್ಚಾಗಿವೆ. ಇವು ಹೆಚ್ಚಾಗಲು ಅನಧಿಕೃತ ಮದ್ಯ ಮಾರಾಟ, ಭೂ ವಿವಾದ, ಗಾಂಜಾ ಮಾರಾಟ ಕೂಡ ಕಾರಣವಾಗಿವೆ. ಮನೆಗಳ್ಳತನ, ವಾಹನ ಕಳ್ಳತನ ಹಾಗೂ ರಾಬರಿ ಪ್ರಕರಣಗಳು ಹೆಚ್ಚಾಗಿವೆ. ಮೊಬೈಲ್ ಕಳ್ಳತನವನ್ನು ರಾಬರಿ ಪ್ರಕರಣವೆಂದು ಪರಿಗಣಿಸಲಾಗುತ್ತಿದೆ ಎಂದರು.

ಫೋಕ್ಸೋ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂದ ಅವರು, ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಒಟ್ಟಾರೆ ಶಿಕ್ಷೆ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಅಪಘಾತ ಪ್ರಕರಣಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣದ ಹೆಚ್ಚಾಗುವಂತೆ ಕ್ರಮಕೈಗಗೊಳ್ಳಲಾಗುತ್ತದೆ ಎಂದರು.

ನಗರದಲ್ಲಿ ಸಂಚಾರ ವ್ಯವಸ್ಥೆಗೆ ಸುಧಾರಣೆಗೆ ಇಷ್ಟರಲ್ಲೇ ಸಭೆ ನಡೆಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಯಾದ ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಫಲಕ ಅಳವಡಿಸಲಾಗುತ್ತದೆ. ಶಾಲೆ ಬಿಡುವ ಸಂದರ್ಭದಲ್ಲಿ ಹೋಂ ಗಾರ್ಡ್ ಅಥವಾ ಪೊಲೀಸರನ್ನು ನಿಯೋಜನೆ ಮಾಡಿ ಅಪಘಾತ ನಿಯಂತ್ರಿಸಲಾಗುತ್ತದೆ. ಇದಕ್ಕಾಗಿ ಸಿಆರ್‌ಪಿ, ಬಿಆರ್‌ಪಿ ಹಾಗೂ ಬಿಇಓ ಗಳನ್ನೊಳಗೊಂಡ ತಂಡ ರಚನೆ ಮಾಡಲಾಗುತ್ತದೆ ಎಂದರು.

Swathi MG

Recent Posts

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

11 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

27 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

39 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

43 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

1 hour ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago