News Karnataka Kannada
Sunday, May 05 2024
ಶಿವಮೊಗ್ಗ

ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತನ್ನಿ :ಡಾ॥ ಸೆಲ್ವಮಣಿ

Selvamani
Photo Credit :

ಶಿವಮೊಗ್ಗ :  ಕಾರಣಂತರಗಳಿಂದ ಶಾಲೆಯಿಂದ ಹೊರಗುಳಿದ ಹಾಗೂ ಕಲಿಕೆಯಿಂದ ವಿಮುಖರಾಗುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಂತೆ ಜಿಲ್ಲಾಧಿಕಾರಿ ಡಾ॥ ಸೆಲ್ವಮಣಿ ಅವರು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ಸೂಚಿಸಿದರು.

ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಗಳ ಹೊಸ 15ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಮೂರನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸರ್ಕಾರದ ಸೂಚನೆಯಂತೆ ಆಯಾ ಶಾಲೆಗಳ ವ್ಯಾಪ್ತಿಯಲ್ಲಿ ಶಿಕ್ಷಕರು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಶಾಲೆಗೆ ದಾಖಲಿಸುವ ಕಾರ್ಯ ಎಂದಿನಂತೆ ಮುಂದುವರೆದಿದೆ. ಆದರೆ ಸರ್ಕಾರದ ಅಧಿಕಾರಿಗಳ ಪ್ರಯತ್ನದ ಜೊತೆಗೆ ಸಮುದಾಯದ ಮುಖಂಡರ ಪ್ರಯತ್ನ ಅತ್ಯಗತ್ಯವಾಗಿದೆ ಎಂದವರು ನುಡಿದರು.

ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಹಲವು ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಅಂತೆಯೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅನುಕೂಲವಾಗುವಂತೆ ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸಿ ಬ್ಯಾಂಕ್ ಖಾತೆ ತೆರೆದು ಆಧಾರ್ ಜೋಡಣೆ ಮಾಡಿಸುವಂತೆ ಸಲಹೆ ನೀಡಿದರು.

ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ದೊರೆಯುತ್ತಿರುವ ಸಾಲಸೌಲಭ್ಯ, ಸಹಾಯಧನ ಬಿಡುಗಡೆ ಹಾಗೂ ಸಮಸ್ಯೆಗಳ ಕುರಿತು ಶೀಘ್ರದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಬ್ಯಾಂಕ್ ವ್ಯವಸ್ಥಾಪಕರ ಸಭೆ ಕರೆದು ಪ್ರಗತಿ ಪರಶೀಲನೆ ನಡೆಸಲಾಗುವುದು ಎಂದರು.

ಮದರೆಸಾಗಳ ಆಧುನೀಕರಣಕ್ಕಾಗಿ ಸರ್ಕಾರವು ಬಿಡುಗಡೆಗೊಳಿಸಿದ ಅನುದಾನ ಸದ್ಬಳಕೆಯಾಗುವಂತೆ ಅಧಿಕಾರಿಗಳು ಗಮನಹರಿಸಲು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯಡಿ ಹೆಚ್ಚು ಜನರಿಗೆ ಸ್ವಯಂ ಉದ್ಯೋಗ ತರಬೇತಿ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಧರ್ಮಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಂ.ಕರಭೀಮಣ್ಣನವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ॥ ಕಿರಣ್ ಕುಮಾರ್, ಸಮಿತಿ ಸದಸ್ಯ ಮೌಲಾನ ಅಮ್ಜದ್ ಹುಸೇನ್, ಡಾ॥ ಎಸ್‌.ಮನ್ಸೂರ್ ಮೀರಾನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು