ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ಬಾಗಿನ ಅರ್ಪಿಸಿದ ಬಿ.ಎಸ್‌.ವೈ

  ಶಿಕಾರಿಪುರ: ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ 110ಗ್ರಾಮಗಳ 249ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಸುಮಾರು 850ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಭಾಗವಾಗಿ ಅಡಗಂಟಿ ಗ್ರಾಮದ ಸಮೀಪ ನಿರ್ಮಿಸಿರುವ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿ ಚಾಲನೆ ನೀಡಿದರು.

ಅವರು ಇಂದು ಶಿಕಾರಿಪುರ ತಾಲೂಕು ಅಡಗಂಟಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆಗಳಿಗೆ ಸುಮಾರು 1500ಕೋಟಿ ರೂ.ಗಳ ಬೃಹತ್‌ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿತ್ತಿರುವುದು ಐತಿಹಾಸಿಕ ಕಾರ್ಯವಾಗಿದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ ಕಾರ್ಯಾನುಷ್ಟಾನಗೊಳ್ಳಲಿದೆ ಎಂದರು.

ಈ ಯೋಜನೆಯ ಕರಾರುವಕ್ಕಾದ ಅನುಷ್ಠಾನದಿಂದಾಗಿ ವರ್ಷಪೂರ್ತಿ ಬಿಸಿಲು ಬರದಿಂದ ಕಂಗೆಟ್ಟಿದ್ದ ಈ ಪ್ರದೇಶದ ಜನರಲ್ಲಿ ಮಂದಹಾಸ ಮೂಡಿದೆ. ರೈತರು ಸ್ವಾಭಿಮಾನದಿಂದ ನೆಮ್ಮದಿಯ ಜೀವನ ನಡೆಸಲು, ಕೃಷಿ ಚಟುವಟಿಕೆ ನಡೆಸಲು, ಹಾಗೂ ಜನ-ಜಾನುವಾರುಗಳಿಗೆ ಶುದ್ದ ನೀರು ಒದಗಿಸಲು ಸಹಕಾರಿಯಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಹಕರಿಸಿದ ತಂತ್ರಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳು ಅಭಿನಂದನಾರ್ಹರು ಎಂದರು.

ದೇಶದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಉತ್ಪನ್ನಗಳಿಗೆ ನ್ಯಾಯೋಚಿತವಾದ ಬೆಲೆ ದೊರೆಯುವಂತಾಗಬೇಕು. ಆಗ ಸಹಜವಾಗಿ ರೈತರ ಮೊಗದಲ್ಲಿ ಮಂದಹಾಸ ಕಾಣಬಹುದಾಗಿದೆ ಎಂದರು.

ಯೋಜನೆಯ ಆರಂಭದಲ್ಲಿ ಪ್ರಾಯೋಗಿಕವಾಗಿ ಭಾರಿ ಸಾಮರ್ಥ್ಯದ ಮೂರು ಯಂತ್ರಗಳಲ್ಲಿ ನೀರನ್ನು ಹರಿಸಲಾಗುತ್ತಿದೆ. ಈ ಯಂತ್ರಗಳ ಸಂಖ್ಯೆ 5ಕ್ಕೆ ಹೆಚ್ಚಿಸಿದಲ್ಲಿ ಇನ್ನು ಪ್ರಮಾಣದ ನೀರು ವೇಗವಾಗಿ ಹರಿದು ಬರಲಿದೆ. ಪ್ರಸ್ತುತ ಈ ಯೋಜನೆಯಡಿ 1.5TMC ನೀರನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಳೇನಹಳ್ಳಿಯ ಶ್ರೀಗಳು ಮಾತನಾಡಿ, ಶಿಕಾರಿಪುರ ತಾಲೂಕಿನ ಸರ್ವಾಂಗೀಣ ವಿಕಾಸಕ್ಕಾಗಿ ಯಡಿಯೂರಪ್ಪನವರು ಹೊಂದಿದ್ದ ಅಮೂಲ್ಯ ಚಿಂತನೆಗಳು, ಕಂಡ ಕನಸುಗಳು ಹಾಗೂ ಅವರ ಸಂಕಲ್ಪ ಸಾಕಾರಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ತಿನ ಸದಸ್ಯರಾದ ಎಸ್‌.ರುದ್ರೇಗೌಡರು, ಶ್ರೀಮತಿ ಭಾರತಿಶೆಟ್ಟಿ, ಯು.ಬಿ.ಬಣಕಾರ್, ಕೆ.ಎಸ್‌.ಗುರುಮೂರ್ತಿ, ಎಸ್‌.ದತ್ತಾತ್ರಿ ಸೇರಿದಂತೆ ಹಲವು ಮಠಾಧಿಪತಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Swathi MG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

23 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

32 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

43 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago