ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತ

ಶಿವಮೊಗ್ಗ : ಜಿಲ್ಲೆಯ ಮುದ್ದಿನ ಕೊಪ್ಪ ಗ್ರಾಮದ ಬಳಿಯ ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತ  ನಡೆದಿದೆ. ಇದರಿಂದಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ನಿನ್ನೆ ರಾತ್ರಿ ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿಯಲ್ಲಿ ಲಾರಿ ಚಾಲಕ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ, ಏಕಾಏಕಿ ಬಲಭಾಗಕ್ಕೆ ತಿರುಗಿದ್ದರಿಂದಾಗಿ, ಎದುರಿನಿಂದ ಬರುತ್ತಿದ್ದಂತ ಕಾರೊಂದಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರು ಚಲಾಯಿಸಿಕೊಂಡು ಕೆಲಸ ನಿಮಿತ್ತ ಆಯನೂರಿಗೆ ತೆರಳಿ, ವಾಪಾಸ್ ಶಿವಮೊಗ್ಗದ ಸಂಬಂಧಿಕರೊಬ್ಬರ ಮನೆಗೆ ತೆರಳುತ್ತಿದ್ದಂತ ಹೊನ್ನಾಳಿಯ ನಾಗೇಂದ್ರ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಲಾರಿಯು ಡಿಕ್ಕಿ ಹೊಡೆದದ್ದರಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲನೆ ಮಾಡುತ್ತಿದ್ದಂತ ನಾಗೇಂದ್ರ ಅವರ ಮೃತದೇಹವನ್ನು ಹೊರ ತೆಗೆಯಲು ಜನರು ಹರಸಾಹಸ ಪಡುವಂತಾಗಿತ್ತು. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬುದಾಗಿ ಹೇಳಲಾಗುತ್ತಿದೆ

Gayathri SG

Recent Posts

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

16 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

31 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

48 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

1 hour ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

2 hours ago