News Karnataka Kannada
Tuesday, April 30 2024
ಶಿವಮೊಗ್ಗ

ಕೇಂದ್ರ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನ ಅಗತ್ಯ: ಸಂಸದ ಬಿ.ವೈ.ರಾಘವೇಂದ್ರ

Bsy Son
Photo Credit :

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವನಮಟ್ಟ ಸುಧಾರಣೆ ಮಾಡುವ ಯೋಜನೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ದೀನ ದಯಾಳ್ ಅಂತ್ಯೋದಯ ಯೋಜನೆ, ಗ್ರಾಮೀಣ ಕೌಶಲ್ಯ ಯೋಜನೆ, ಸಾಮಾಜಿಕ ಭದ್ರತಾ ಯೋಜನೆಗಳು, ಪ್ರಧಾನಮಂತ್ರಿ ಆವಾಸ್ ಯೋಜನೆ, ಗ್ರಾಮ ಜ್ಯೋತಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಇದರ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಮೂಲಸೌಕರ್ಯಗಳ ಕೊರತೆ ಬಗ್ಗೆ ಸ್ಥಳೀಯವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ 36ಲಕ್ಷ ಮಾನವ ದಿನಗಳ ಗುರಿಯಿದ್ದು, ಇದುವರೆಗೆ 34ಲಕ್ಷ ಮಾನವ ದಿನಗಳ ಸಾಧನೆ ಮಾಡಲಾಗಿದೆ. 18380ಲಕ್ಷ ರೂ. ವಾರ್ಷಿಕ ಆರ್ಥಿಕ ಗುರಿಯಿದ್ದು, ಇದುವರೆಗೆ 13937 ಲಕ್ಷ ರೂ. ಗುರಿಯನ್ನು ಸಾಧಿಸಲಾಗಿದೆ.

ಗ್ರಾಮ ಸಡಕ್ ಯೋಜನೆಯಡಿ 74ಕಿಮೀ ರಸ್ತೆ ನಿರ್ಮಾಣದ ಗುರಿಯಿದ್ದು, ಇದುವರೆಗೆ 64 ಕಿಮೀ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಕಾಮಗಾರಿಯಲ್ಲಿ ಐದು ವರ್ಷದ ನಿರ್ವಹಣೆ ಒಳಗೊಂಡಿದ್ದು, ಸಮರ್ಪಕವಾಗಿ ರಸ್ತೆಯ ನಿರ್ವಹಣೆಯನ್ನು ಕೈಗೊಳ್ಳಬೇಕು. ಯೋಜನೆಯ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ರಸ್ತೆಗಳ ನಿರ್ಮಾಣದ ಬಗ್ಗೆ ಮಾಹಿತಿಯನ್ನು ನೀಡುವಂತೆ ಅವರು ತಿಳಿಸಿದರು.

ಅರಿವು ಮೂಡಿಸಿ: ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕು. ರಾಷ್ಟಿçÃಯ ಕುಟುಂಬ ನೆರವು ಯೋಜನೆ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳು ನಿಗದಿತ ಸಮಯದ ಒಳಗಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಅನುದಾನದ ಬಗ್ಗೆ ಸಾಕಷ್ಟು ಮುಂಚಿತವಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಅಂಗವಿಕಲರಿಗೆ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಕುರಿತು ಜಿಲ್ಲೆಯಾದ್ಯಂತ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಸೌಲಭ್ಯ ದೊರೆಯುವಂತೆ ಖಾತ್ರಿಪಡಿಸಿಕೊಳ್ಭಬೇಕು ಎಂದು ಹೇಳಿದರು.

ಪ್ರಧಾನಮಂತ್ರಿ ಭೇಟಿ: ಮುಂದಿನ ತಿಂಗಳು ಪ್ರಧಾನಮಂತ್ರಿ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಕೇಂದ್ರದ ಎಲ್ಲಾ ಯೋಜನೆಗಳು ಸಮರ್ಪಕವಾಗಿ ಅನುಷ್ಟಾನಗೊಳ್ಳಬೇಕಿದೆ. ಎಲ್ಲಾ ಅರ್ಹರಿಗೆ ಪಡಿತರ ಚೀಟಿ ಮತ್ತು ಆಯುಷ್ಮಾನ್ ಆರೋಗ್ಯ ಕಾರ್ಡ್ ಈ ತಿಂಗಳ ಅಂತ್ಯದ ಒಳಗಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಗ್ರಾಮ ವನ್ ಸೇವೆ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಅನುಷ್ಟಾನಗೊಳಿಸಲು ಸೂಕ್ತ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಅವರು ಸೂಚನೆ ನೀಡಿದರು.

ಪ್ರತಿಯೊಬ್ಬರಿಗೂ ನಿವೇಶನ: ಗ್ರಾಮೀಣ ಪ್ರದೇಶದಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನಗಳನ್ನು ಸಿದ್ಧಪಡಿಸಿ ನೀಡಬೇಕು. ಪ್ರತಿಯೊಬ್ಬ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಲು ನಿವೇಶನ ಒದಗಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು