ಶಿವಮೊಗ್ಗ: ಕೋಳಿಗೆ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದೆ.
ಭದ್ರಾವತಿಯ ಭೂತನಗುಡಿಯ ನಿವಾಸಿ ಸೆಂದಿಲ್ ಕುಮಾರ್(35) ಮೃತ ಕಾರ್ಮಿಕ.
ಈತ ಕೋಳಿ ಫೀಡ್ ಫ್ಯಾಕ್ಟರಿಯಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ. ಫೀಡ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.