ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಕಡೆಕಲ್ಲು ಗ್ರಾಮದಲ್ಲಿ ಶುಕ್ರವಾರ ಬಂಧಿಸಿದ್ದಾರೆ.
ಸೂಳೇಬೈಲಿನ ದಾದಾಫೀ ಯಾನೆ ಬಚ್ಚಾ (24), ಮೊಹಮ್ಮ್ ಹುಸ್ಮಾ್ ಯಾನೆ ರೊಡ್ಡ (24) ವರ್ಷ, ಸಲೀಂ (25) ಸಮೀ್ ಎ. (22) ಮೆಹಬೂಬ್ ಪಾಷಾ (25) ಬಂಧಿತ ಆರೋಪಿಗಳಾಗಿದ್ದಾರೆ.
ಇವರಿಂದ 45,000 ರೂ . ವೌಲ್ಯದ 1 ಕೆಜಿ 120 ಗ್ರಾಂ ತೂಕದ ಒಣ ಗಾಂಜಾ ಹಾಗೂ 4 ಮಚ್ಚುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಗಸ್ತಿನಲ್ಲಿದ್ದ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ