ಶಿವಮೊಗ್ಗ : ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ, ಪೊಲೀಸರಿಗೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ದೂರು ನೀಡಲಾಗಿದೆ.
ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಗೆ ತೆರಳಿದಂತ ಯುವ ಕಾಂಗ್ರೆಸ್ ಕಾರ್ಯಕರ್ತರು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನೀಡಿರುವಂತ ದೂರಿನಲ್ಲಿ, ಧಾರ್ಮಿಕ ಭಾವನೆ ಕೆರಳಿಸುವುದು, ಸಾಮಾಜಿಕ ಶಾಂತಿ ಹದಗೆಡಿಸಲು ಗೃಹ ಸಚಿವ ಅರಗ ಜ್ಞಾನೇಂದ್ರ ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಶತ್ರುತ್ವ ಬೆಳೆಯಲು ಕಾರಣವಾಗಿದೆ ಎಂಬುದಾಗಿ ಆರೋಪಿಸಿ, ದೂರು ನೀಡಿದ್ದಾರೆ.